ನಕಲು ಮಾಡಿ ಸಿಕ್ಕಿಬಿದ್ದ ಅವಮಾನದಲ್ಲಿ ಸಾವಿಗೆ ಶರಣಾದ ಯುವಕ
ಉಡುಪಿ: ಪರೀಕ್ಷೆ ವೇಳೆ ನಕಲು ಮಾಡುವಾಗ ಸಿಕ್ಕಿಬಿದ್ದ ಅವಮಾನದಲ್ಲಿ ವಿದ್ಯಾರ್ಥಿ ಪರೀಕ್ಷೆ ನಡೆಯುತ್ತಿರುವಾಗಲೇ ಕಟ್ಟಡದ 6ನೇ ಮಹಡಿಯಿಂದ ಜಿಗಿದು ಸಾವಿಗೆ ಶರಣಾಗಿರುವ ಘಟನೆ ಮಣಿಪಾಲದ ಮಾಹೆ ವಿವಿಯಲ್ಲಿ ನಡೆದಿದೆ. ಬಿಹಾರ ಮೂಲದ ಸತ್ಯಂ ಸುಮನ್(19) ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿ.
ಸತ್ಯಂ ಸುಮನ್ ಮಾಹೆ ವಿವಿಯ ಎಂಸಿಎಚ್‌ಪಿ ವಿಭಾಗದ ದ್ವಿತೀಯ ವರ್ಷದ ವಿದ್ಯಾರ್ಥಿಯಾಗಿದ್ದು, ಪರೀಕ್ಷೆಯಲ್ಲಿ ಮೊಬೈಲ್ ಇಟ್ಟುಕೊಂಡು ನಕಲು ಮಾಡುತ್ತಿದ್ದಾಗ ಸಿಕ್ಕಿಬಿದ್ದಿದ್ದಾನೆ. ಅವನನ್ನು ಪರೀಕ್ಷೆ ಹಾಲ್‌ನಿಂದ ಹೊರಕ್ಕೆ ಕಳುಹಿಸಲಾಗಿದ್ದು, ಇದರಿಂದ ಅವಮಾನಿತನಾಗಿ ಪರೀಕ್ಷೆ ನಡೆಯುತ್ತಿರುವಾಗಲೇ ಆರನೇ ಮಹಡಿಗೆ ಹೋಗಿ ಜಿಗಿದಿದ್ದಾನೆ. ಸತ್ಯಂ ಸುಮನ್ ಕಟ್ಟಡದಿಂದ ಜಿಗಿಯುತ್ತಿದ್ದಂತೆ ಇತರ ವಿದ್ಯಾರ್ಥಿಗಳು ಭಯಗೊಂಡಿದ್ದು, ವಿದ್ಯಾರ್ಥಿಗಳು ಆತಂಕದಿಂದ ಅತ್ತಿತ್ತ ಓಡಾಡುವ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ.
ವಿದ್ಯಾರ್ಥಿ ಕಾಲೇಜು ಕಟ್ಟಡದಿಂದ ಬಿದ್ದು ಸಾವನ್ನಪ್ಪಿದ ಪ್ರಕರಣ ಸಂಬಂಧ ಮಣಿಪಾಲ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಮುಂದುವರಿಸಿದ್ದಾರೆ.









































