ಗಾಂಜಾ ಮತ್ತಿನಲ್ಲಿ ಪೊಲೀಸರ ಮೇಲೆ ಹಲ್ಲೆ : ಇಬ್ಬರು ಮಹಿಳೆಯರ ಬಂಧನ

ಗೋಕರ್ಣ: ಮಾದಕದ್ರವ್ಯ ಸೇವಿಸಿ ಪೊಲೀಸರ ಮೇಲೆ ಹಲ್ಲೆ ನಡೆಸಿದ ಆರೋಪದ ಮೇಲೆ ಬೆಂಗಳೂರಿನ ಇಬ್ಬರು ಮಹಿಳಾ ಟೆಕ್ಕಿಗಳನ್ನು ಗೋಕರ್ಣ ಪೊಲೀಸರು ಬಂಧಿಸಿದ್ದಾರೆ. ಮಹಿಳೆಯರನ್ನು ಬಿಹಾರದಪಲ್ಲವಿ ಪ್ರಿಯಾ (29) ಮತ್ತು ಜಾರ್ಖಂಡ್‌ನ ಪ್ರಿಯಾ ರಾಯ್ (26) ಎಂದು ಗುರುತಿಸಲಾಗಿದೆ. ಬೆಂಗಳೂರಿನ ಸಾಫ್ಟ್‌ವೇರ್‌ ಕಂಪನಿಯ ಉದ್ಯೋಗಿಗಳಾಗಿರುವ ಇವರು ಅಡ್ಡಾದಿಡ್ಡಿಯಾಗಿ ಚಾಲನೆ ಮಾಡಿ ಮಹಾಬಲೇಶ್ವರ ದೇವಸ್ಥಾನದ ಬಳಿ ನಿಂತಿದ್ದ ಮಹಿಳಾ ಪೊಲೀಸ್ ಪೇದೆಯೊಬ್ಬರಿಗೆ ಡಿಕ್ಕಿ ಹೊಡೆದಿದ್ದಾರೆ.
ವಾಹನವನ್ನು ಅಡ್ಡಾದಿಡ್ಡಿಯಾಗಿ ಓಡಿಸುತ್ತಿದ್ದುದನ್ನು ಕಂಡ ಪೊಲೀಸರು ತಡೆದಾಗ ಮಹಿಳೆಯರು ಕಾನ್‌ಸ್ಟೆಬಲ್‌ಗೆ ಅವಾಚ್ಯವಾಗಿ ನಿಂದಿಸಿ ಹಲ್ಲೆ ಮಾಡಿದ್ದಾರೆ. ಸ್ಥಳದಲ್ಲಿ ಜಮಾಯಿಸಿದ ಜನರು ಕಾನ್‌ಸ್ಟೆಬಲ್‌ನನ್ನು ರಕ್ಷಿಸಿ ಮಹಿಳೆಯರನ್ನು ಠಾಣೆಗೆ ಕರೆದೊಯ್ದರು. ಠಾಣೆಯಲ್ಲಿ ಮತ್ತೊಬ್ಬ ಪೊಲೀಸ್ ಅಧಿಕಾರಿ ಅವರನ್ನು ವಿಚಾರಣೆಗೆ ಒಳಪಡಿಸಿದಾಗ ಅಲ್ಲಿಯೂ ಮಹಿಳೆಯರು ಮತ್ತೆ ದಾಂಧಲೆ ಎಸಗಿದ್ದಾರೆ. ನಂತರ ಪೊಲೀಸರು ಅವರನ್ನು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಿದ್ದು, ಗಾಂಜಾ ಸೇವಿಸಿರುವುದು ದೃಢಪಟ್ಟಿದೆ.

ಈ ಸಂಬಂಧ ದೂರು ದಾಖಲಾಗಿದ್ದು, ಇಬ್ಬರನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ. ಪುಣ್ಯಕ್ಷೇತ್ರವಾದ ಗೋಕರ್ಣದಲ್ಲಿ ಡ್ರಗ್ಸ್ ಸೇವನೆ ಹಾಗೂ ಅಕ್ರಮ ಪಾರ್ಟಿ ಮಾಡುವ ಘಟನೆಗಳು ಹೆಚ್ಚುತ್ತಿವೆ. ಗೋಕರ್ಣದಲ್ಲಿ ಮಾದಕ ವಸ್ತು ಸೇವನೆ ಮತ್ತು ಗಲಾಟೆ ಸೃಷ್ಟಿಸಿದ ಮಹಿಳೆಯರನ್ನು ಬಂಧಿಸಿರುವುದು ಇದೇ ಮೊದಲು ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.







































































error: Content is protected !!
Scroll to Top