ರಸ್ತೆ ದಾಟುತ್ತಿದ್ದ ವೇಳೆ ಕಾರು ಡಿಕ್ಕಿ – ಆಸ್ಪತ್ರೆ ದಾಖಲು

ಕಾರ್ಕಳ : ರಸ್ತೆ ದಾಟುತ್ತಿದ್ದ ವೇಳೆ ಕಾರು ಡಿಕ್ಕಿ ಹೊಡೆದ ಪರಿಣಾಮ ವ್ಯಕ್ತಿಯೋರ್ವರು ಗಾಯಗೊಂಡು ಆಸ್ಪತ್ರೆ ದಾಖಲಾದ ಘಟನೆ ಫೆ. 19ರಂದು ಬೆಳ್ಮಣ್ ಗ್ರಾಮದಲ್ಲಿ ಸಂಭವಿಸಿದೆ.
ರಾಹುಲ್ ರಾಜ್ ಎಂಬವರು ಬೆಳ್ಮಣ್ ಚರ್ಚ್ ಬಳಿ ರಸ್ತೆ ದಾಟುತ್ತಿರುವಾಗ ಪಡುಬಿದ್ರೆ ಕಡೆಯಿಂದ ಮುಂಡ್ಕೂರು ಕಡೆಗೆ ಕಿರಣ್ ಎಂಬಾತ ಚಲಾಯಿಸಿಕೊಂಡು ಬರುತ್ತಿದ್ದ ಕಾರು ಡಿಕ್ಕಿ ಹೊಡೆದಿದೆ. ಪರಿಣಾಮವಾಗಿ ರಾಹುಲ್‌ ರಾಜ್‌ನ ಕಾಲಿಗೆ ಮೂಳೆ ಮುರಿತದ ಗಾಯವಾಗಿದ್ದು ಉಡುಪಿ ಜಿಲ್ಲಾ ಸರಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಈ ಕುರಿತು ಕಾರ್ಕಳ ಗ್ರಾಮಾಂತರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿರುತ್ತದೆ.





























































































































error: Content is protected !!
Scroll to Top