ಕಾರ್ಕಳ : 2023-24ನೇ ಶೈಕ್ಷಣಿಕ ವರ್ಷದಿಂದ ರಾಜ್ಯದ ಎಲ್ಲಾ ಸರಕಾರಿ ಮತ್ತು ಅನುದಾನಿತ ಶಾಲಾ ಮಕ್ಕಳಿಗೆ ಬಹುಪೌಷ್ಠಿಕಾಂಶವುಳ್ಳ ಸಾಯಿ ಶ್ಯೂರ್ ರಾಗಿ ಮಾಲ್ಟ್ ಹೆಲ್ತ್ ಮಿಕ್ಸ್ ವಿತರಿಸುವ ಕಾರ್ಯಕ್ರಮಕ್ಕೆ ಸಿಎಂ ಸಿದ್ದರಾಮಯ್ಯ ಫೆ. 22 ರಂದು ವಿಧಾನಸೌಧದ ಬ್ಯಾಂಕ್ವೆಟ್ ಹಾಲ್ನಲ್ಲಿ ಚಾಲನೆ ನೀಡಿದರು.
ತಾಲೂಕು ಮಟ್ಟದಲ್ಲಿ ಶಾಲಾ ಶಿಕ್ಷಣ ಇಲಾಖೆ, ಶ್ರೀ ಸತ್ಯಸಾಯಿ ಅನ್ನಪೂರ್ಣ ಟ್ರಸ್ಟ್ ಮತ್ತು ಕೆಎಂಎಫ್ ಸಂಸ್ಥೆಯ ಸಹಯೋಗದಲ್ಲಿ ಪೆರ್ವಾಜೆ ಸುಂದರ ಪುರಾಣಿಕ ಸ್ಮಾರಕ ಸರಕಾರಿ ಪ್ರೌಢಶಾಲೆಯಲ್ಲಿ ಯೋಜನೆಗೆ ಚಾಲನೆ ನೀಡಲಾಯಿತು.
ಈ ಸಂದರ್ಭ ತಹಶೀಲ್ದಾರ್ ನರಸಪ್ಪ, ಕ್ಷೇತ್ರ ಶಿಕ್ಷಣಾಧಿಕಾರಿ ಲೋಕೇಶ್, ಅಕ್ಷರ ದಾಸೋಹ ಸಹಾಯಕ ನಿರ್ದೇಶಕ ಭಾಸ್ಕರ್ ಟಿ., ಶಾಲಾ ಅಭಿವೃದ್ಧಿ ಸಮಿತಿಯ ಅಧ್ಯಕ್ಷ ವಿಜಯರಾಜ್ ಶೆಟ್ಟಿ, ಶಾಲಾ ಅಭಿವೃದ್ಧಿ ಸಮಿತಿ ಸದಸ್ಯರಾದ ಪ್ರಕಾಶ್ ರಾವ್, ರಾಜೇಂದ್ರ ಹಾಗೂ ಸಾವಿತ್ರಿ ಮನೋಹರ್, ನಿವೃತ್ತ ಮುಖ್ಯ ಶಿಕ್ಷಕಿ ಹರ್ಷಿಣಿ ಕೆ., ಪುರಸಭೆಯ ಮಾಜಿ ಸದಸ್ಯ ಪ್ರಕಾಶ್ ರಾವ್ ಹಾಗೂ ಶಿಕ್ಷಕ ವೃಂದವರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು. ಮುಖ್ಯ ಶಿಕ್ಷಕ ದಿವಾಕರ್ ಸ್ವಾಗತಿಸಿದರು. ಶಿಕ್ಷಕರಾದ ಪ್ರತಿಮಾ ನಾಯಕ್ ಕಾರ್ಯಕ್ರಮ ನಿರೂಪಿಸಿ, ಹರಿಶ್ಚಂದ್ರ ಬಾಯಾರಿ ವಂದಿಸಿದರು.































































