ಬಿಜೆಪಿ ಯುವ ಮೋರ್ಚಾ ರಾಜ್ಯ ಕಾರ್ಯದರ್ಶಿಯಾಗಿ ವಿಖ್ಯಾತ್‌ ಶೆಟ್ಟಿ

ಕಾರ್ಕಳ : ಬಿಜೆಪಿ ಯುವ ಮೋರ್ಚಾದ ರಾಜ್ಯ ಕಾರ್ಯದರ್ಶಿಯಾಗಿ ಕಾರ್ಕಳದ ವಿಖ್ಯಾತ್‌ ಶೆಟ್ಟಿ ಅವರು ನೇಮಕಗೊಂಡಿದ್ದಾರೆ. ಈ ಕುರಿತು ಬಿಜೆಪಿ ಯುವಮೋರ್ಚಾದ ರಾಜ್ಯಾಧ್ಯಕ್ಷ ಧೀರಜ್‌ ಮುನಿರಾಜ್‌ ಪ್ರಕಟನೆಯಲ್ಲಿ ತಿಳಿಸಿದ್ದಾರೆ. ವಿಖ್ಯಾತ್‌ ಶೆಟ್ಟಿ ಈ ಹಿಂದೆ ಬಿಜೆಪಿ ಯುವ ಮೋರ್ಚಾದ ಕಾರ್ಕಳ ನಗರದ ಉಪಾಧ್ಯಕ್ಷರಾಗಿ, ಪ್ರಧಾನ ಕಾರ್ಯದರ್ಶಿಯಾಗಿ, ಅಧ್ಯಕ್ಷರಾಗಿ ನಂತರ ಯುವ ಮೋರ್ಚಾದ ಕಾರ್ಕಳ ಮಂಡಲದ ಪ್ರಧಾನ ಕಾರ್ಯದರ್ಶಿಯಾಗಿ, ಅಧ್ಯಕ್ಷರಾಗಿ, ಉಡುಪಿ ಜಿಲ್ಲಾ ಯುವ ಮೋರ್ಚಾ ಅಧ್ಯಕ್ಷರಾಗಿ ಕಾರ್ಯನಿರ್ವಹಿಸಿರುತ್ತಾರೆ. ಸುಮಾರು 15 ವರ್ಷಗಳಿಂದ ಪದಾಧಿಕಾರಿಯಾಗಿ ಪಕ್ಷದ ಕಾರ್ಯಚಟುವಟಿಕೆಗಳಲ್ಲಿ ಸಕ್ರಿಯರಾಗಿದ್ದಾರೆ.





























































































































error: Content is protected !!
Scroll to Top