ಬೆಂಗಳೂರು : ಕರ್ನಾಟಕ ಹೈಕೋರ್ಟ್‌ನ ನೂತನ ಮುಖ್ಯ ನ್ಯಾಯಮೂರ್ತಿಯಾಗಿ ನಿಲಯ್ ವಿಪಿನಚಂದ್ರ ಅಂಜಾರಿಯಾ ಅವರು ಭಾನುವಾರ ಪ್ರಮಾಣ ವಚನ ಸ್ವೀಕರಿಸಿದರು. ರಾಜಭವನದ ಗಾಜಿನ ಮನೆಯಲ್ಲಿ ನಡೆದ ಸಮಾರಂಭದಲ್ಲಿ ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ಅವರಿಗೆ ಪ್ರಮಾಣ ವಚನ ಬೋಧಿಸಿದರು.
ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ, ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಎಚ್‌ಕೆ ಪಾಟೀಲ್ ಸೇರಿದಂತೆ ಗಣ್ಯರು ಉಪಸ್ಥಿತರಿದ್ದರು. ಅಂಜಾರಿಯಾ ಅವರು ಈ ಹಿಂದೆ ಗುಜರಾತ್ ಹೈಕೋರ್ಟ್‌ನ ನ್ಯಾಯಾಧೀಶರಾಗಿದ್ದರು ಮತ್ತು ಅವರ ಹೆಸರನ್ನು ಸುಪ್ರೀಂ ಕೋರ್ಟ್ ಕೊಲಿಜಿಯಂ ಈ ತಿಂಗಳ ಆರಂಭದಲ್ಲಿ ಶಿಫಾರಸು ಮಾಡಿತ್ತು.









































