ಬೆಂಗಳೂರು : ರಾಜ್ಯಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪರ ಯಶವಂತಪುರ ಕ್ಷೇತ್ರದ ಬಿಜೆಪಿ ಶಾಸಕ ಎಸ್.ಟಿ.ಸೋಮಶೇಖರ್ ಅವರು ಅಡ್ಡಮತದಾನ ಮಾಡಿದ್ದಾರೆ ಎಂದು ವರದಿಯಾಗಿದೆ.
ಎಸ್. ಟಿ. ಸೋಮಶೇಖರ್ ಅವರು ಕಾಂಗ್ರೆಸ್‌ಗೆ ಅಡ್ಡ ಮತದಾನ ಮಾಡಿದ್ದಾರೆ ಎಂದು ಬಿಜೆಪಿ ಚುನಾವಣಾ ಏಜೆಂಟ್‌ರೊಬ್ಬರು ಖಚಿತಪಡಿಸಿದ್ದಾರೆ.
ಮತದಾನಕ್ಕೂ ಮೊದಲು ಮಾಧ್ಯಮಗಳ ಜೊತೆ ಮಾತನಾಡಿದ್ದ ಸೋಮಶೇಖರ್ ಅವರು, “11 ವರ್ಷದಿಂದ ಎಲ್ಲರಿಗೂ ಮತ ಹಾಕಿದ್ದೇನೆ. ಆದರೆ, ರಾಜ್ಯಸಭೆಗೆ ಆಯ್ಕೆ ಆದವರು ಒಂದು ರೂಪಾಯಿ ಅನುದಾನವನ್ನೂ ಕೊಟ್ಟಿಲ್ಲ. ನೇರ ನೇರ ಹೇಳುತ್ತೇನೆ, ನಾನು ಈ ಬಾರಿ ಆತ್ಮಸಾಕ್ಷಿಯಂತೆ ಮತ ಹಾಕುತ್ತೇನೆ. ಕಳೆದ ಬಾರಿ (ಹಾಲಿ ಹಣಕಾಸು ಸಚಿವೆ) ನಿರ್ಮಲಾ ಸೀತಾರಾಮನ್ ಅವರಿಗೆ ಮತ ಹಾಕಿದ್ದೆ. ಆಮೇಲೆ ನಿರ್ಮಲಾ ಸೀತಾರಾಮನ್ ನನಗೆ ಭೇಟಿಗೆ ಅಪಾಯಿಟ್ಮೆಂಟ್ ಕೂಡ ಕೊಡಲೇ ಇಲ್ಲ,” ಎಂದು ಬೇಸರ ಹೊರಹಾಕಿದ್ದರು.






























































