ಕ್ರೈಸ್ಟ್‌ಕಿಂಗ್‌ : ಪುನಶ್ಚೇತನ ಮತ್ತು ವ್ಯಕ್ತಿತ್ವ ವಿಕಸನ ಕಾರ್ಯಕ್ರಮ

ಕಾರ್ಕಳ : ವಿದ್ಯಾರ್ಥಿಗಳು ಸವಾಲುಗಳನ್ನು ಸ್ವೀಕರಿಸಬೇಕು, ಬಲಿಷ್ಟ ಮನೋಬಲವೊಂದಿದ್ದರೆ ಮನುಷ್ಯನ ಮುಂದೆ ಅಸಾಧ್ಯವಾದ ಕೆಲಸ ಯಾವುದೂ ಇಲ್ಲ. ಸಾಧನೆ ಮಾಡಬೇಕೆಂಬ ಮನೋಬಲವಿದ್ದರೆ ನಮ್ಮ ದೈಹಿಕ ಮಾನಸಿಕ ಯಾವುದೇ ರೀತಿಯ ವೈಕಲ್ಯಗಳು ನಮಗೆ ಅಡ್ಡಿಯಾಗಲಾರವು. ಪ್ರಸ್ತುತ ವಿದ್ಯಾರ್ಥಿಗಳು ರಾಷ್ಟ್ರ ಮತ್ತು ಅಂತಾರಾಷ್ಟ್ರೀಯ ಮಟ್ಟದ ಸ್ಪರ್ಧೆಗಳಿಗೆ ತಮ್ಮನ್ನು ತಾವು ಸಿದ್ಧಪಡಿಸಿಕೊಳ್ಳಬೇಕು. ಮಕ್ಕಳು ನಮಗಾಗಿ ನಾವು ವಿದ್ಯಾರ್ಜನೆಗೈಯಬೇಕು ಎಂಬ ಮನಸ್ಥಿತಿಯನ್ನು ಬೆಳೆಸಿಕೊಳ್ಳಬೇಕು ಜೊತೆಗೆ ಋಣಾತ್ಮಕ ಮನೋಭಾವವನ್ನು ಸಂಪೂರ್ಣವಾಗಿ ತ್ಯಜಿಸಬೇಕು ಎಂದು ಅಂತಾರಾಷ್ಟ್ರೀಯ ತರಬೇತುದಾರ ಹಾಗೂ ಇನ್ನಾ ಎಂ.ವಿ.ಶಾಸ್ತ್ರಿ ಪ್ರೌಢಶಾಲಾ ಮುಖ್ಯ ಶಿಕ್ಷಕ ರಾಜೇಂದ್ರ ಭಟ್ ಹೇಳಿದರು.

ಅವರು ಕ್ರೈಸ್ಟ್‌ಕಿಂಗ್ ಪದವಿ‌ ಪೂರ್ವ ಕಾಲೇಜಿನಲ್ಲಿ ದ್ವಿತೀಯ ಪಿಯುಸಿಗೆ ಸೇರ್ಪಡೆಗೊಳ್ಳುತ್ತಿರುವ ವಿದ್ಯಾರ್ಥಿಗಳಿಗೆ ಪುನಶ್ಚೇತನ ಮತ್ತು ವ್ಯಕ್ತಿತ್ವ ವಿಕಸನ ಕುರಿತು ಮಾಹಿತಿ ಹಾಗೂ ಸಂವಾದ ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿ ಮಾತನಾಡಿದರು.
ಪ್ರಾಂಶುಪಾಲ ಲಕ್ಷ್ಮೀನಾರಾಯಣ ಕಾಮತ್ ಮಾತನಾಡಿ ವಿದ್ಯಾರ್ಥಿಗಳು ಜೀವನದಲ್ಲಿ ಶಿಸ್ತನ್ನು ಅಳವಡಿಸಿಕೊಳ್ಳುವುದರ ಜೊತೆಗೆ ಪ್ರಶ್ನಿಸುವ ಮನೋಭಾವ ಬೆಳೆಸಿಕೊಳ್ಳಬೇಕು. ಪ್ರಶ್ನೆ ಕೇಳುವ ಮನೋಭಾವ ಇದ್ದರೆ ನಮ್ಮ ವ್ಯಕ್ತಿತ್ವ ಉತ್ತಮಗೊಂಡು ಉತ್ತಮ ಸಾಧಕರಾಗಿ ಮೂಡಿ ಬರಲು ಸಾಧ್ಯ ಎಂದು ಹೇಳಿದರು. ಉಪ ಪ್ರಾಂಶುಪಾಲ ಡಾ. ಪ್ರಕಾಶ್ ಭಟ್ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಕನ್ನಡ ಉಪನ್ಯಾಸಕ ಉಮೇಶ್ ಬೆಳ್ಳಿಪ್ಪಾಡಿ ಕಾರ್ಯಕ್ರಮ ನಿರ್ವಹಿಸಿದರು.





























































































































error: Content is protected !!
Scroll to Top