ಹಿರ್ಗಾನ : ಕಾರು – ಟೆಂಪೋ ಡಿಕ್ಕಿ

ಕಾರ್ಕಳ : ಕಾರು ಮತ್ತು ಮಿನಿ ಟೆಂಪೋ ಮುಖಾಮುಖಿ ಡಿಕ್ಕಿಯಾಗಿ ಟೆಂಪೋ ಚಾಲಕ ಗಾಯಗೊಂಡಿರುವ ಘಟನೆ ಫೆ. 26ರ ರಾತ್ರಿ ಹಿರ್ಗಾನ ಗ್ರಾಮದ ನೆಲ್ಲಿಕಟ್ಟೆ ಮಂಗಿಲಾರು ಕ್ರಾಸ್ ಬಳಿ ಸಂಭವಿಸಿದೆ. ಮಿನಿ ಟೆಂಪೋ ಕಾರ್ಕಳ ಕಡೆಯಿಂದ ಹೆಬ್ರಿ ಕಡೆಗೆ ಹೋಗುತ್ತಿದ್ದು ಇದೇ ವೇಳೆ ಕಾರ್ಕಳ ಕಡೆಗೆ ಬರುತ್ತಿದ್ದ ಕಾರು ಮುಖಾಮುಖಿ ಡಿಕ್ಕಿಯಾಗಿದೆ. ಪರಿಣಾಮವಾಗಿ ಕಾರಿನ ಏರ್ ಬ್ಯಾಗ್ ಓಪನ್ ಆಗಿದ್ದು ಕಾರಿನಲ್ಲಿದ್ದ ಪ್ರಯಾಣಿಕರಿಗೆ ಯಾವುದೇ ಗಾಯಗಳಾಗಿಲ್ಲ. ಆದರೆ ಟೆಂಪೋ ಚಾಲಕ ಗಾಯಗೊಂಡಿದ್ದು, ಗಾಯಳುವನ್ನು ಮಂಗಳೂರಿನ ಫಾದರ್‌ ಮುಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿರುತ್ತದೆ. ಈ ಕುರಿತು ಕಾರ್ಕಳ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿರುತ್ತದೆ.





























































































































error: Content is protected !!
Scroll to Top