ಕಲಂಬಾಡಿ ಪದವಿನಲ್ಲಿ ಬೆಂಕಿ – ಸ್ಥಳೀಯರ ಸಮಯ ಪ್ರಜ್ಞೆಯಿಂದ ತಪ್ಪಿದ ಅನಾಹುತ

ಕಾರ್ಕಳ : ಕಲಂಬಾಡಿ ಪದವು ಮೈದಾನದಲ್ಲಿ ಬೆಂಕಿ ಹತ್ತಿಕೊಂಡಿದ್ದು, ಸ್ಥಳೀಯರ ಸಮಯ ಪ್ರಜ್ಞೆ ಮತ್ತು ಶೀಘ್ರ ಕಾರ್ಯಾಚರಣೆಯಿಂದ ಬಾರಿ ಅನಾಹುತ ತಪ್ಪಿದೆ.
ಫೆ. 29ರಂದು ಮಧ್ಯಾಹ್ನದ ವೇಳೆ ಕಲಂಬಾಡಿ ಪದವಿನಲ್ಲಿ ಗಿಡಗಂಟಿಗಳಿಂದ ಕೂಡಿದ ಮೈದಾನದಲಿ ಬೆಂಕಿ ಹರಡಿಕೊಂಡಿದ್ದು, ಇದನ್ನು ಗಮನಿಸಿದ ಸ್ಥಳೀಯರು ತಕ್ಷಣವೇ ಎಚ್ಚೆತ್ತುಕೊಂಡಿದ್ದು ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ. ಬಳಿಕ ಸ್ಥಳೀಯರು ನೀಡಿದ ಮಾಹಿತಿಯ ಮೇರೆಗೆ ಘಟನಾ ಸ್ಥಳಕ್ಕೆ ದೌಡಾಯಿಸಿದ ಅಗ್ನಿಶಾಮಕ ಸಿಬ್ಬಂದಿ ಬೆಂಕಿ ಹರಡಿದ ಜಾಗಕ್ಕೆ ನೀರು ಹಾಯಿಸಿದ್ದಾರೆ. ಬಿಸಿಲಿನ ಬೇಗೆಗೆ ಬೆಂಕಿ ಹತ್ತಿಕೊಂಡಿರಬಹುದು ಎನ್ನಲಾಗುತ್ತಿದೆ. ಬಿಜೆಪಿ ಕ್ಷೇತ್ರಾಧ್ಯಕ್ಷ ನವೀನ್‌ ನಾಯಕ್ ಸೇರಿದಂತೆ 50ಕ್ಕೂ ಅಧಿಕ ಮಂದಿ ಸ್ಥಳೀಯರು ಬೆಂಕಿ ನಂದಿಸುವ ಕಾರ್ಯದಲ್ಲಿ ತೊಡಗಿದ್ದರು.















































































error: Content is protected !!
Scroll to Top