ಸರಕಾರದ ಯೋಜನೆಗಳನ್ನು ಜನತೆಗೆ ತಲುಪಿಸುವುದು ಆಡಳಿತ ವರ್ಗದ ಕರ್ತವ್ಯ

ಕಾರ್ಕಳ : ಯಾವುದೇ ಸರಕಾರ ಅಧಿಕಾರಕ್ಕೆ ಬಂದಾಗ ಅನೇಕ ಯೋಜನೆಗಳನ್ನು ಘೋಷಣೆ ಮಾಡುತ್ತದೆ. ಆದರೆ ಯೋಜನೆಗಳು ಜನತೆಗೆ ತಲುಪಿದೆಯೇ ಎಂಬುದನ್ನು ಪರಿಶೀಲನೆ ನಡೆಸುವುದು ಸಹ ಆಡಳಿತ ವರ್ಗದ ಕರ್ತವ್ಯವಾಗಿದೆ. ಹಾಗಾದಲ್ಲಿ ಮಾತ್ರ ಫಲಾನುಭವಿಗಳಿಗೆ ಯೋಜನೆಗಳು ತಲುಪಲು ಸಾಧ್ಯ. ಕಳೆದ 10 ವರ್ಷಗಳಿಂದ ಯಾವುದೇ ಮಧ್ಯವರ್ತಿಗಳಿಲ್ಲದೆ ನೇರವಾಗಿ ಕೇಂದ್ರ ಮತ್ತು ರಾಜ್ಯ ಸರಕಾರದ ಯೋಜನೆಗಳ ಹಣ ಪಾವತಿಯಾಗುತ್ತಿರುವುದು ಶ್ಲಾಘನೀಯ ಎಂದು ಶಾಸಕ ಸುನಿಲ್‌ ಕುಮಾರ್‌ ಅಭಿಪ್ರಾಯಪಟ್ಟರು.

ಅವರು ಫೆ. 29ರಂದು ಪೆರ್ವಾಜೆಯ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಸಭಾಭವನದಲ್ಲಿ ನಡೆದ ಗ್ಯಾರಂಟಿ ಸಮಾವೇಶವನ್ನು ಉದ್ಘಾಟಿಸಿ ಮಾತನಾಡಿದರು.
ರಾಜ್ಯ ಸರಕಾರದ ಕೇವಲ ಗ್ಯಾರಂಟಿ ಯೋಜನೆಗಳಿಂದ ಅಭಿವೃದ್ಧಿ ಸಾಧ್ಯವಿಲ್ಲ. ಜನತೆಗ ಮೂಲ ಭೂತ ಸೌಕರ್ಯಗಳಾದ ಕುಡಿಯುವ ನೀರು, ವಸತಿ, ಶಿಕ್ಷಣ, ರಸ್ತೆ ಮೊದಲಾದ ಅಭಿವೃದ್ಧಿ ಚಟುವಟಿಕೆಗಳನ್ನು ಕೈಗೊಳ್ಳಬೇಕು. ಜನರ ಜೀವನ ಮಟ್ಟ ಸುಧಾರಣೆಯ ಕಾರ್ಯಕ್ರಮಗಳನ್ನು ಕೈಗೊಳ್ಳಬೇಕು ಎಂದರು.

ವೇದಿಕೆಯಲ್ಲಿ ಇಓ ಗುರು ಶಾಂತಪ್ಪ, ಬಿಇಓ ಬಿ. ಎ. ಲೋಕೇಶ್‌, ವಿವಿಧ ಗ್ರಾ. ಪಂ. ಅಧ್ಯಕ್ಷ ಉಪಾಧ್ಯಕ್ಷರು ಉಪಸ್ಥಿತರಿದ್ದರು. ತಹಶೀಲ್ದಾರ್‌ ನರಸಪ್ಪ ಸ್ವಾಗತಿಸಿ, ಪ್ರಾಸ್ತಾವಿಕವಾಗಿ ಮಾತನಾಡಿದರು. ಶಿಕ್ಷಕ ಪ್ರಭಾಕರ್‌ ಶೆಟ್ಟಿ ಕೊಂಡಳ್ಳಿ ಕಾರ್ಯಕ್ರಮ ನಿರೂಪಿಸಿದರು. ಪುರಸಭಾ ಮುಖ್ಯಾಧಿಕಾರಿ ರೂಪ ಟಿ. ಶೆಟ್ಟಿ ವಂದಿಸಿದರು.





























































































































error: Content is protected !!
Scroll to Top