ರಾಜ್ಯ ಮಟ್ಟದ ಅಬಾಕಸ್ ಪರೀಕ್ಷೆ – ಮಾಳ ಅನುದಾನಿತ ಶಾಲಾ ವಿದ್ಯಾರ್ಥಿಗಳ ಸಾಧನೆ

ಕಾರ್ಕಳ : ಮಾಳ ಶ್ರೀ ಗುರುಕುಲ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಇತ್ತೀಚೆಗೆ ರಾಜ್ಯಮಟ್ಟದ ಅಬಾಕಸ್ ಪರೀಕ್ಷೆ ನಡೆಸಲಾಗಿದ್ದು, ಶಾಲೆಯ ನಾಲ್ಕು ವಿದ್ಯಾರ್ಥಿಗಳು ರಾಜ್ಯಮಟ್ಟದಲ್ಲಿ ದ್ವಿತೀಯ ಸ್ಥಾನ ಪಡೆದಿದ್ದಾರೆ. ಏಳು ವಿದ್ಯಾರ್ಥಿಗಳು ಸಮಾಧಾನಕರ ಬಹುಮಾನವನ್ನು ತಮ್ಮದಾಗಿಸಿಕೊಂಡಿದ್ದಾರೆ. ಈ ಪರೀಕ್ಷೆಯನ್ನು ಅಬಾಕಸ್ ತರಬೇತುದಾರ ಗುರುರಾಜ ಮತ್ತು ಅವರ ತಂಡದವರು ನಡೆಸಿರುತ್ತಾರೆ. ವಿಜೇತ ವಿದ್ಯಾರ್ಥಿಗಳಿಗೆ ಫೆ. 28ರಂದು ಶಾಲೆಯಲ್ಲಿ ನಡೆದ ರಾಷ್ಟ್ರೀಯ ವಿಜ್ಞಾನ ದಿನಾಚರಣೆಯಲ್ಲಿ ಬಹುಮಾನ ವಿತರಿಸಲಾಯಿತು. ಶಿಕ್ಷಕ ರಕ್ಷಕ ಸಂಘದ ಅಧ್ಯಕ್ಷ ನಾಗಭೂಷಣ ಮರಾಠೆ, ನಿವೃತ್ತ ಶಿಕ್ಷಕ ರಾಷ್ಟ್ರ ಪ್ರಶಸ್ತಿ ವಿಜೇತ ನಾಗಭೂಷಣ ಜೋಶಿ, ಕೇಶವ ಡೋಂಗ್ರೆ‌, ಮುಖ್ಯ ಶಿಕ್ಷಕರು, ಸಹ ಶಿಕ್ಷಕರು ಪೋಷಕರು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.





























































































error: Content is protected !!
Scroll to Top