ಮಾ. 4 : ಬೈಲೂರು ಗ್ರಾಮ ಪಂಚಾಯತ್‌ ನೂತನ ಕಟ್ಟಡ ಉದ್ಘಾಟನೆ

ಕಾರ್ಕಳ : ಬೈಲೂರು ಗ್ರಾಮ ಪಂಚಾಯತ್‌ನ ನೂತನ ಕಟ್ಟಡದ ಉದ್ಘಾಟನಾ ಸಮಾರಂಭ ಮಾ. 4ರಂದು ಮಧ್ಯಾಹ್ನ 4ಗಂಟೆಗೆ ನಡೆಯಲಿದೆ. 4.30ಕ್ಕೆ ರಸಮಂಜರಿ ಕಾರ್ಯಕ್ರಮ ನಡೆಯಲಿದೆ.

ಸಭಾ ಕಾರ್ಯಕ್ರಮ
ಸಂಜೆ 5.30ಕ್ಕೆ ಸಭಾ ಕಾರ್ಯಕ್ರಮ ನಡೆಯಲಿದ್ದು, ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌ ಉದ್ಘಾಟಿಸಲಿರುವರು. ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಹಾಗೂ ಐಟಿ ಬಿಟಿ ಸಚಿವ ಪ್ರಿಯಾಂಕ್‌ ಖರ್ಗೆ ಘನ ಉಪಸ್ಥಿತಿಯಲ್ಲಿರುವರು. ಶಾಸಕ ವಿ. ಸುನಿಲ್‌ ಕುಮಾರ್‌ ಅಧ್ಯಕ್ಷತೆ ವಹಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ವಿಧಾನ ಪರಿಷತ್‌ ವಿಪಕ್ಷ ನಾಯಕ ಕೋಟ ಶ್ರೀನಿವಾಸ್‌ ಪೂಜಾರಿ, ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷ ಕೆ. ಜಯಪ್ರಕಾಶ್‌ ಹೆಗ್ಡೆ, ವಿಧಾನ ಪರಿಷತ್‌ ಶಾಸಕರಾದ ಎಸ್‌. ಎಲ್.‌ ಭೋಜೆ ಗೌಡ, ಡಾ. ತೇಜಸ್ವಿನಿ ಗೌಡ, ಮಂಜುನಾಥ ಭಂಡಾರಿ, ಬೈಲೂರು ಗ್ರಾ. ಪಂ. ಅಧ್ಯಕ್ಷೆ ಸುಜಾತ, ಉಡುಪಿ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಎಂ. ಟಿ. ರೇಜು, ಜಿಲ್ಲಾಧಿಕಾರಿ ಡಾ. ವಿದ್ಯಾಕುಮಾರಿ, ಜಿಲ್ಲಾ ಪಂಚಾಯತ್‌ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರತೀಕ್‌ ಬಾಯಲ್‌, ಪೊಲೀಸ್‌ ಅಧೀಕ್ಷಕ ಅರುಣ ಕೆ., ತಹಶೀಲ್ದಾರ್‌ ನರಸಪ್ಪ, ತಾ. ಪಂ. ಕಾರ್ಯನಿರ್ವಹಣಾಧಿಕಾರಿ ಗುರು ಶಾಂತಪ್ಪ ಉಪಸ್ಥಿತರಿರಲಿದ್ದಾರೆ.
ಸಭಾ ಕಾರ್ಯಕ್ರಮದ ಬಳಿಕ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಲಿದ್ದು, ಸಂಜೆ 7.30ಕ್ಕೆ ಚಾಪರ್ಕ ಕಲಾವಿದರಿಂದ ಪುದರ್‌ ದೀದಾಂಡ್‌ ನಾಟಕ ಪ್ರದರ್ಶನಗೊಳ್ಳಲಿದೆ ಎಂದು ಪಂಚಾಯತ್‌ನ ಪ್ರಕಟನೆ ತಿಳಿಸಿದೆ.





























































































































error: Content is protected !!
Scroll to Top