ಹೊಸದಿಲ್ಲಿ: ವಾಣಿಜ್ಯ ಬಳಕೆ ಸಿಲಿಂಡರ್ ಬೆಲೆ 25 ರೂ. ಏರಿಕೆಯಾಗಿದೆ. ಮಾರ್ಚ್ 1ರಿಂದ ಜಾರಿಗೆ ಬರುವಂತೆ 19 ಕೆಜಿಯ ವಾಣಿಜ್ಯ ಸಿಲಿಂಡರ್ಗಳ ಬೆಲೆಯನ್ನು 25 ರೂ. ಹೆಚ್ಚಳ ಮಾಡಲಾಗಿದೆ. ಆದರೆ ಗೃಹ ಬಳಕೆಯ ಸಿಲಿಂಡರ್ ದರದಲ್ಲಿ ಯಾವುದೇ ಬದಲಾವಣೆ ಮಾಡಿಲ್ಲ.
ಲೋಕಸಭೆ ಚುನಾವಣೆಗೆ ಕೆಲವೇ ದಿನಗಳು ಬಾಕಿ ಇದೆ. ಮಾರ್ಚ್ ತಿಂಗಳ 10ರ ಬಳಿಕ ಚುನಾವಣಾ ವೇಳಾಪಟ್ಟಿ ಘೋಷಣೆಯಾಗಲಿದೆ ಎಂದು ನಿರೀಕ್ಷೆ ಮಾಡಲಾಗಿದೆ. ಇಂತಹ ಸಮಯದಲ್ಲಿಯೇ ವಾಣಿಜ್ಯ ಬಳಕೆಯ ಸಿಲಿಂಡರ್ಗಳ ದರದಲ್ಲಿ ಏರಿಕೆಯಾಗಿದೆ. ಈ ಹಿಂದೆ ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳು ತಿಂಗಳಿನಲ್ಲಿ ಎರಡು ಬಾರಿ ಪೆಟ್ರೋಲ್, ಡೀಸೆಲ್, ಎಲ್ಪಿಜಿಗಳ ಬೆಲೆಯನ್ನು ಪರಿಷ್ಕರಣೆ ಮಾಡಲು ಅವಕಾಶವಿತ್ತು. ಆದರೆ ಈಗ ತಿಂಗಳ ಮೊದಲ ದಿನವೇ ದರಗಳನ್ನು ಪರಿಷ್ಕರಣೆ ಮಾಡುತ್ತವೆ.
ವಾಣಿಜ್ಯ ಸಿಲಿಂಡರ್ ಬೆಲೆ 25 ರೂ. ಏರಿಕೆ































































