ಹೆಬ್ರಿಯಲ್ಲಿ ಗ್ಯಾರಂಟಿ ಅನುಷ್ಠಾನ ಸಮಾವೇಶ
ಹೆಬ್ರಿ: ಸರಕಾರದ ಯೋಜನೆಗಳು ಜನರಿಗೆ ಸರಿಯಾಗಿ ತಲುಪುತ್ತಿದೆಯಾ ಎಂದು ನೋಡಿಕೊಳ್ಳುವ ಜವಾಬ್ದಾರಿ ಅಧಿಕಾರಿಗಳದ್ದು. ಸರಕಾರದ ಐದು ಗ್ಯಾರಂಟಿಗಳು ಎಲ್ಲಾ ಜನರಿಗೆ ಸಿಗಬೇಕು. ಎಲ್ಲವನ್ನು ಉಚಿತವಾಗಿ ಕೊಟ್ಟು ಸರಕಾರ ನಡೆಸಲು ಸಾಧ್ಯವಿಲ್ಲ. ಇದರೊಂದಿಗೆ ಇನ್ನಿತರ ಅಭಿವೃದ್ಧಿ ಕೆಲಸಗಳು ಆಗಬೇಕು ಎಂದು ನಾನು ಶಾಸಕನಾಗಿ ಸರಕಾರವನ್ನು ಒತ್ತಾಯಿಸುತ್ತೇನೆ. ರಸ್ತೆ, ಆಸ್ಪತ್ರೆ, ಶಾಲೆ, ಕುಡಿಯುವ ನೀರು ಇದು ಜನರಿಗೆ ಮೊದಲು ಸಿಗಬೇಕು. ಗ್ಯಾರಂಟಿ ಯೋಜನೆ ಜೊತೆಗೆ ಇತರ ಅಭಿವೃದ್ಧಿ ಕೆಲಸಗಳು ನಡೆದರೆ ಮಾತ್ರ ಉತ್ತಮ ಸಮಾಜ ಸಿಗಲು ಸಾಧ್ಯ ಎಂದು ಶಾಸಕ ಸುನಿಲ್ ಕುಮಾರ್ ಹೇಳಿದರು.
ಗ್ಯಾರಂಟಿ ಯೋಜನೆಗಳ ಹೋಬಳಿ ಮಟ್ಟದ ಗ್ಯಾರಂಟಿ ಸಮಾವೇಶವನ್ನು ಗುರುವಾರ ಹೆಬ್ರಿ ಸಮಾಜ ಮಂದಿರದಲ್ಲಿ ಉದ್ಘಾಟಿಸಿ ಮಾತನಾಡಿದರು.
ಹೆಬ್ರಿ ತಹಸೀಲ್ದಾರ್ ಪ್ರಸಾದ್, ತಾಲೂಕ್ ಪಂಚಾಯತ್ ಕಾರ್ಯನಿರ್ವಹಣಾ ಅಧಿಕಾರಿ ಶಶಿಧರ್ ಕೆ. ಜಿ., ಹೆಬ್ರಿ ಗ್ರಾಮ ಪಂಚಾಯತ್ ಅಧ್ಯಕ್ಷ ತಾರಾನಾಥ್ ಬಂಗೇರ, ಚಾರ ಗ್ರಾಮ ಪಂಚಾಯತ್ ಅಧ್ಯಕ್ಷ ದಿನೇಶ್ ಕುಮಾರ್ ಶೆಟ್ಟಿ, ಮಾಡಮಕ್ಕಿ ಗ್ರಾಮ ಪಂಚಾಯತ್ ಅಧ್ಯಕ್ಷ ಉದಯ್ ಕುಮಾರ್ ಶೆಟ್ಟಿ, ವರಂಗ ಗ್ರಾಮ ಪಂಚಾಯತ್ ಅಧ್ಯಕ್ಷ ಸಂತೋಷ್ ಕುಮಾರ್ ಹಾಗೂ ಮುದ್ರಾಡಿ ಗ್ರಾಮ ಪಂಚಾಯತ್ ಅಧ್ಯಕ್ಷೆ ವಸಂತಿ, ಮೆಸ್ಕಾಂ ಎಇ ನಾಗರಾಜ್ ಉಪಸ್ಥಿತರಿದ್ದರು. ವಿವಿಧ ಇಲಾಖೆಯ ಅಧಿಕಾರಿಗಳು. ಗ್ರಾಮಸ್ಥರು, ಜನಪ್ರತಿನಿಧಿಗಳು ಉಪಸ್ಥಿತರಿದ್ದರು. ಸರ್ಕಾರದ ಐದು ಗ್ಯಾರಂಟಿಗಳು ಸರಿಯಾಗಿ ಸಿಗದವರಿಗೆ ಸ್ಥಳದಲ್ಲಿ ಪರಿಹಾರ ನೀಡಲಾಯಿತು.

































































