ಕ್ರೀಡಾ ಭಾರತಿ ಉಡುಪಿ ಜಿಲ್ಲೆ ಆಯೋಜನೆ
ಉಡುಪಿ : ಕ್ರೀಡಾ ಭಾರತಿ ಉಡುಪಿ ಜಿಲ್ಲೆ ವತಿಯಿಂದ ಮಣಿಪಾಲ ಜೂನಿಯರ್ ಕಾಲೇಜ್ ಮಣಿಪಾಲ ಇಲ್ಲಿ ಜಿಲ್ಲಾ ಕ್ರೀಡಾ ಸಮ್ಮೇಳನ-2024ರ ಪ್ರಯುಕ್ತ ಜಿಲ್ಲಾ ದೈಹಿಕ ಶಿಕ್ಷಣ ಶಿಕ್ಷಕರಿಗಾಗಿ ತ್ರೋಬಾಲ್, ವಾಲಿಬಾಲ್ ಹಾಗೂ ಹಗ್ಗಜಗ್ಗಾಟ ಪಂದ್ಯಾಟ ಜರಗಿತು.
ಮಣಿಪಾಲ ಹೈಸ್ಕೂಲ್ ಟ್ರಸ್ಟ್ ಅಧ್ಯಕ್ಷಟಿ. ಸುಧಾಕರ್ ಪೈ ಉದ್ಘಾಟಿಸಿದರು. ಮಂಜುನಾಥ್ ಶೆಟ್ಟಿ ಬೈಲೂರು ಅಧ್ಯಕ್ಷತೆ ವಹಿಸಿದ್ದರು. ರಾಷ್ಟ್ರೀಯ ಸ್ವಯಂಸೇವಕ ಸಂಘದ ಮಂಗಳೂರು ವಿಭಾಗ ಸಂಘಚಾಲಕ ನಾರಾಯಣ ಶೆಣೈ, ಉಡುಪಿ ತಾಲೂಕಿನ ಕ್ಷೇತ್ರ ಶಿಕ್ಷಣಾಧಿಕಾರಿ ಡಾಕ್ಟರ್ ಎಲ್ಲಮ್ಮ, ಮಣಿಪಾಲ್ ಜೂನಿಯರ್ ಕಾಲೇಜಿನ ಸಂಚಾಲಕ ಪ್ರಕಾಶ್ ಶೆಟ್ಟಿ, ಆಡಳಿತಾಧಿಕಾರಿ ಶೇಷಪ್ಪ ರೈ, ಪ್ರಾಂಶುಪಾಲೆ ರೂಪಾ ಎಲ್ ಭಟ್, ಉಪ ಪ್ರಾಂಶುಪಾಲೆ ಅನಿತಾ ಮಲ್ಯ, ಜಿಲ್ಲಾ ದೈಹಿಕ ಶಿಕ್ಷಣ ಪರಿವೀಕ್ಷಣಾಧಿಕಾರಿ ರವಿಚಂದ್ರ ಕಾರಂತ್, ರಾಜ್ಯ ದೈಹಿಕ ಶಿಕ್ಷಣ ಶಿಕ್ಷಕರ ಸಂಘದ ಉಡುಪಿ ಜಿಲ್ಲಾ ಅಧ್ಯಕ್ಷ ವಿಜಯ್ ಕುಮಾರ್ ಶೆಟ್ಟಿ, ತಾಲೂಕು ಯುವಜನ ಕ್ರೀಡಾಧಿಕಾರಿ ಹಿತೇಶ್ ಶೆಟ್ಟಿ ಉಪಸ್ಥಿತರಿದ್ದರು.
ರಾಷ್ಟ್ರೀಯ ಸ್ವಯಂಸೇವಕ ಸಂಘದ ಪ್ರಾಂತ ಶಾರೀರಿಕ ಪ್ರಮುಖ ಸತೀಶ್ ಕುತ್ಯಾರ್ ಪ್ರಸ್ತಾವನೆಗೈದರು. ಮಂಗಳೂರು ವಿಭಾಗ ಸಂಯೋಜಕ ಪ್ರಸನ್ನ ಶೆಣೈ ಸ್ವಾಗತಿಸಿ, ಜಿಲ್ಲಾ ಕಾರ್ಯದರ್ಶಿ ಲಿಂಗಯ್ಯ ವಂದಿಸಿದರು. ದೈಹಿಕ ಶಿಕ್ಷಕ ಸತೀಶ್ ಚಂದ್ರ ಶೆಟ್ಟಿ ಚಿತ್ರಪಾಡಿ ಕಾರ್ಯಕ್ರಮ ನಿರೂಪಿಸಿದರು.
ಸಮಾರೋಪ ಸಮಾರಂಭ ಹಾಗೂ ಬಹುಮಾನ ವಿತರಣಾ ಕಾರ್ಯಕ್ರಮದಲ್ಲಿ ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಮುಖ್ಯ ಅತಿಥಿಗಳಾಗಿದ್ದರು. ರಾಷ್ಟ್ರೀಯ ಸ್ವಯಂಸೇವಕ ಸಂಘದ ಉಡುಪಿ ನಗರ ಸಂಘಚಾಲಕ ಮಟ್ಟು ಲಕ್ಷ್ಮೀನಾರಾಯಣ, ನಗರಸಭಾ ಸದಸ್ಯ ನಗರಸಭಾ ಸದಸ್ಯ ವಿಜಯ ಕೊಡವೂರು, ಬೈಂದೂರು ತಾಲೂಕು ಕ್ರೀಡಾ ಭಾರತಿ ಅಧ್ಯಕ್ಷ ಜಯಾನಂದ ಹೋಬಳಿದಾರ್ ಮತ್ತಿತರರು ಅತಿಥಿಗಳಾಗಿದ್ದು ವಿಜೇತರಿಗೆ ಟ್ರೋಫಿ, ಪದಕ ಹಾಗೂ ನಗದು ಬಹುಮಾನಗಳನ್ನು ವಿತರಿಸಲಾಯಿತು.
































































