ರಾಮೇಶ್ವರಂ ಕೆಫೆ ಸ್ಫೋಟಕ್ಕೂ ಅಂಬಾನಿ ಮಗನ ಮದುವೆಗೂ ಇರುವ ಲಿಂಕ್‌ ಏನು?

ಬೆಂಗಳೂರು: ನಗರದ ಕುಂದಲಹಳ್ಳಿಯ ರಾಮೇಶ್ವರಂ ಕೆಫೆಯಲ್ಲಿ ಸ್ಫೋಟ ಪ್ರಕರಣ ತೀವ್ರ ಸ್ವರೂಪ ಪಡೆದುಕೊಂಡಿದ್ದು, ಈ ಘಟನೆ ಹಿಂದೆ ಹಲವು ಅನುಮಾನಗಳು ವ್ಯಕ್ತವಾಗಿವೆ. ಮುಕೇಶ್‌ ಅಂಬಾನಿಯವರ ಪುತ್ರ ಅನಂತ್‌ ಅಂಬಾನಿ ಮದುವೆ ಕಾರ್ಯಕ್ರಮದ ಕ್ಯಾಟರಿಂಗ್‌ ಸರ್ವಿಸ್‌ ಇದೇ ರಾಮೇಶ್ವರ ಕೆಫೆ ಕ್ಯಾಟರಿಂಗ್ ವಹಿಸಿಕೊಂಡಿದೆ. ಅಲ್ಲದೇ ಭಾರತದ್ಯಾಂತ ಕ್ಯಾಟರಿಂಗ್ ವಿಸ್ತರಿಸಲು ನಿರ್ಧಾರಿಸಿದೆ. ಈ ಹಿನ್ನೆಲೆಯಲ್ಲೂ ತನಿಖೆ ನಡೆಯುತ್ತಿದೆ. ಹೊರಗಡೆಯಿಂದ ತಂದಿಟ್ಟಿದ್ದ ಬ್ಯಾಗ್​ನಲ್ಲಿನ ವಸ್ತು ಸ್ಫೋಟವಾಗಿದೆ ಎನ್ನುವ ಮಾಹಿತಿ ಲಭ್ಯವಾಗಿದೆ. ಹೀಗಾಗಿ ಮೇಲ್ನೋಟಕ್ಕೆ ಇದು ದ್ವೇಷದ ಸ್ಪೋಟ ಎನ್ನಲಾಗುತ್ತಿದೆ.

ರಾಮೇಶ್ವರಂ ಕೆಫೆಯ ಕೈತೊಳೆಯುವ ಸ್ಥಳ ಮತ್ತು ಕಿಚನ್ ಹೊರಗಡೆ ಪ್ಲೇಟ್​ಗಳನ್ನು ಇಡುವ ಸ್ಥಳದಲ್ಲಿ ಸ್ಫೋಟವಾಗಿದೆ. ಹೊರಗಿನಿಂದ ತಂದಿಟ್ಟ ಬ್ಯಾಗ್ ಸ್ಫೋಟವಾಗಿದೆ. 10 ಸೆಕೆಂಡ್ ಅಂತರದಲ್ಲಿ 2 ಬಾರಿ ಸ್ಫೋಟವಾಗಿದೆ. ಒಂದು ಬ್ಯಾಂಗ್ ತಂದಿಟ್ಟ ನಂತರ ಭಾರಿ ಪ್ರಮಾಣದಲ್ಲಿ ಸ್ಫೋಟವಾಗಿದ್ದು, ನಾಲ್ವರು ಗ್ರಾಹಕರು, ಮೂವರು ಸಿಬ್ಬಂದಿ ಗಾಯಗೊಂಡಿದ್ದಾರೆ ಎಂದು ರಾಮೇಶ್ವರಂ ಕೆಫೆ ವ್ಯವಸ್ಥಾಪಕ ನಿರ್ದೇಶಕಿ(ಎಂಡಿ) ದಿವ್ಯಾ ಮಾಹಿತಿ ನೀಡಿದ್ದಾರೆ.

ಈ ಹಿಂದೆ 2 ಬಾರಿ ಅನುಮಾನಾಸ್ಪದ ಬ್ಯಾಗ್ ತಂದಿಟ್ಟು ಹೋಗಿದ್ದರು. ಒಂದು ಬ್ಯಾಗ್ ತೆಗೆದು ನೋಡಿದಾಗ ಮಡಕೆ, ಕುಡಿಕೆ ಪತ್ತೆಯಾಗಿತ್ತು. ಮತ್ತೊಂದು ಬ್ಯಾಗನ್ನು ನಿರ್ಜನ ಪ್ರದೇಶದಲ್ಲಿರಿಸಿ ಪೊಲೀಸರಿಗೆ ಮಾಹಿತಿ ನೀಡಿದ್ದರು. ಆ ಬ್ಯಾಗನ್ನು ಪೊಲೀಸರಿಗೆ ಒಪ್ಪಿಸಿದ್ದೆವು, ಅದರಲ್ಲಿ ಏನಿತ್ತು ಗೊತ್ತಿಲ್ಲ. ಘಟನೆ ಬಗ್ಗೆ ಪೊಲೀಸರಿಗೆ ದೂರನ್ನು ನೀಡಿದ್ದೆವು. ಇಂದು ಕೂಡ ವಾಸ್ ಬೇಸಿನ್ ಬಳಿ ಬ್ಯಾಗ್ ತಂದಿಟ್ಟು ಹೋಗಿದ್ದರು. ಆ ಬ್ಯಾಗ್ ಇರಿಸಿದ್ದ ಸ್ಥಳದಲ್ಲೇ ಇಂದು ಸ್ಫೋಟವಾಗಿದೆ ಎಂದು ತಿಳಿಸಿದ್ದಾರೆ.

ಸುತ್ತಮುತ್ತಲಿನ ಠಾಣೆಯ ಪೊಲೀಸರು, ಹಿರಿಯ ಅಧಿಕಾರಿಗಳು ಘಟನಾ ಸ್ಥಕ್ಕೆ ದೌಡಾಯಿಸಿದ್ದಾರೆ. ಎಸಿಪಿ ರೀನಾ ಸುವರ್ಣ ಮತ್ತು ಮಾರತ್ತಹಳ್ಳಿ ಪೊಲೀಸರು ಸಹ ಸ್ಳಳದಲ್ಲಿ ಮೊಕ್ಕಂ ಹೂಡಿದ್ದಾರೆ. ಬೆಂಗಳೂರು ನಗರ ಪೊಲೀಸ್ ಆಯುಕ್ತರು ಸಹ ಸ್ಥಳಕ್ಕೆ ಭೇಟಿ ನೀಡಿ ಮಾಹಿತಿ ಪಡೆದುಕೊಳ್ಳುತ್ತಿದ್ದಾರೆ. ಈ ಘಟನೆ ಬಗ್ಗೆ ಗೃಹ ಸಚಿವ ಪರಮೇಶ್ವರ್​ ಅವರು ಅಧಿಕಾರಿಗಳ ಬಳಿ ಮಾಹಿತಿ ಪಡೆದುಕೊಂಡಿದ್ದಾರೆ. ರಾಷ್ಟ್ರೀಯ ತನಿಖಾ ದಳ (ಎನ್​ಐಎ) ತಂಡ ಸಹ ರಾಮೇಶ್ವರಂ ಕೆಫೆಗೆ ಭೇಟಿ ನೀಡಿ ಮಾಹಿತಿ ಪಡೆಯುತ್ತಿದೆ. ಮತ್ತೊಂದು ತಂಡ ಆಸ್ಪತ್ರೆಗೆ ದಾಖಲಾಗಿರುವ ಗಾಯಾಳುಗಳ ಬಳಿ ಮಾಹಿತಿ ಸಂಗ್ರಹಿಸುತ್ತಿದೆ.

ಘಟನೆಯಲ್ಲಿ ಹಲವರಿಗೆ ಗಾಯಗಳಾಗಿವೆ. ಎಲ್ಲರಿಗೂ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿದೆ. ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಮಾಹಿತಿ ಸಂಗ್ರಹಿಸಿದ್ದಾರೆ. ಇದೊಂದು ಸುಧಾರಿತ ಸ್ಫೋಟಕ ಬಳಸಿ ಎಸಗಿದ ಪ್ರಕರಣವಾಗಿದೆ. ಇಂತಹ ಘಟನೆಗಳು ನಡೆಯಬಾರದು, ತನಿಖೆ ನಡೆಸುತ್ತಿದ್ದಾರೆ. ಗೃಹ ಸಚಿವ ಪರಮೇಶ್ವರ್​ರಿಂದ ಮಾಹಿತಿ ಪಡೆದಿದ್ದೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ಸದ್ಯ ಸಿಸಿಟಿವಿ ಪರಿಶೀಲನೆ‌ ನಡೆಯುತ್ತಿದೆ. ಯಾರೋ ಒಬ್ಬರು ಬ್ಯಾಗ್ ಇಟ್ಟಿರುವುದು ತಿಳಿದಿದೆ. ಈ ಕುರಿತು ಪೊಲೀಸರು ತನಿಖೆ‌ ನಡೆಸುತ್ತಿದ್ದಾರೆ. ಇದು ಟೆರರಿಸ್ಟ್ ಮಾಡಿರುವ ಬಗ್ಗೆ ಇನ್ನು ಗೊತ್ತಿಲ್ಲ. ಸ್ವಲ್ಪ ಸಮಯದಲ್ಲೇ ಸಂಪೂರ್ಣ ಮಾಹಿತಿ ಗೊತ್ತಾಗುತ್ತದೆ. ಸ್ಫೋಟ ಭಾರಿ ಪ್ರಮಾಣದಲ್ಲಿ ನಡೆದಿಲ್ಲ. ಸಣ್ಣ ಪ್ರಮಾಣದದ್ದರೂ ಅದು ಪರಿಣಾಮಕಾರಿಯಾಗಿದೆ ಎಂದಿದ್ದಾರೆ.

ಎಲ್ಲರ ಕಾಲದಲ್ಲೂ ಕೂಡ ಇಂಥ ಘಟನೆಗಳು ನಡೆದಿವೆ. ಆದರೆ ಇಂತಹ ಘಟನೆ ನಡೆಯಬಾರದು. ಮಂಗಳೂರಲ್ಲಿ ಘಟನೆ ನಡೆದಿತ್ತು. ಹಿಂದಿನ ಸರ್ಕಾರದಲ್ಲಿ ಹಲವು ಸ್ಫೋಟ ನಡೆದಿತ್ತು. ನಮ್ಮ ಸರ್ಕಾರದಲ್ಲಿ ಇವಾಗ ಈ ಘಟನೆ ನಡೆದಿದೆ. ಆರೋಪಿಗಳನ್ನ ಪತ್ತೆ ಹಚ್ಚಿ ಶಿಕ್ಷಿಸಲಾಗುವುದು. ಬ್ಲಾಸ್ಟ್ ಆಗಿರುವುದು ಸತ್ಯವಾಗಿದೆ. ಬ್ಲಾಸ್ಟ್ ಮಾಡಿರುವವರ ವಿರುದ್ಧ ಕಠಿಣ ಕ್ರಮ ಆಗಲಿದೆ. ಈ ವಿಚಾರದಲ್ಲಿ ರಾಜಕಾರಣ ಮಾಡಬಾರದು ಎಂದು ಹೇಳಿದ್ದಾರೆ.



















































































error: Content is protected !!
Scroll to Top