ಪುತ್ತೂರು : ಬೈಕ್ ಮತ್ತು ಗೂಡ್ಸ್ ವಾಹನ ಡಿಕ್ಕಿಯಾಗಿ ಪದವಿ ವಿದ್ಯಾರ್ಥಿ ಸಾವನ್ನಪ್ಪಿದ ಘಟನೆ ಉಪ್ಪಿನಂಗಡಿ-ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯ ರಾಮಕುಂಜ ಗ್ರಾಮದ ಗೋಳಿತ್ತಡಿ ಬಳಿ ಸೋಮವಾರ ಸಂಭವಿಸಿದೆ.
ಪುತ್ತೂರು ಖಾಸಗಿ ಕಾಲೇಜಿನಲ್ಲಿ ಅಂತಿಮ ಬಿ.ಎ. ಪದವಿ ವ್ಯಾಸಂಗ ಮಾಡುತ್ತಿರುವ ಬೆಳ್ತಂಗಡಿ ತಾಲೂಕಿನ ಬಾರ್ಯ ಗ್ರಾಮದ ಅಜೀರ ನಿವಾಸಿ ಶ್ರೀಜಿಸ್ (20) ಮೃತ ವಿದ್ಯಾರ್ಥಿ.
ಶ್ರೀಜಿಸ್ ರಾಮಕುಂಜ ಶಾರದಾ ನಗರದಲ್ಲಿರುವ ತಮ್ಮ ಚಿಕ್ಕಮ್ಮನ ಮನೆಗೆ ತೆರಳಿ, ಅಲ್ಲಿಂದ ಉಪ್ಪಿನಂಗಡಿ ಕಡೆಗೆ ಹಿಂತಿರುಗುತ್ತಿದ್ದ ವೇಳೆಗೆ ಈ ದುರ್ಘಟನೆ ನಡೆದಿದೆ. ಶ್ರೀಜಿಸ್ ಅವರು ಆಲಂಕಾರು ಬಳಿಯ ಪೆಟ್ರೋಲ್ ಪಂಪ್ ಒಂದರಲ್ಲಿ ಬೈಕ್‌ಗೆ ಪೆಟ್ರೋಲ್ ತುಂಬಿಸಿ ಹಿಂತಿರುಗುತ್ತಿದ್ದ ವೇಳೆ ಉಪ್ಪಿನಂಗಡಿಯಿಂದ ಕಡಬ ಕಡೆಗೆ ತೆರಳುತ್ತಿದ್ದ ಮಿನಿ ಗೂಡ್ಸ್ ನಡುವೆ ಡಿಕ್ಕಿ ಹೊಡೆದಿದೆ.
ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಶ್ರೀಜಿಸ್ ರನ್ನು ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಚಿಕಿತ್ಸೆ ಫಲಕಾರಿಯಾಗದೆ ಅವರು ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.
ಬೈಕ್‌ಗೆ ಗೂಡ್ಸ್ ವಾಹನ ಡಿಕ್ಕಿ : ವಿದ್ಯಾರ್ಥಿ ಸಾವು















































