ಬೆಂಗಳೂರು : ರಾಮೇಶ್ವಂರ ಕೆಫೆ ಬಾಂಬ್ ಸ್ಫೋಟ ಪ್ರಕರಣ ಬೆನ್ನಲ್ಲೆ ಇದೀಗ ಬೆಂಗಳೂರಿನಲ್ಲಿ ಮತ್ತೆ ಬಾಂಬ್ ಸ್ಫೋಟಿಸುವ ಬೆದರಿಕೆ ಇಮೇಲ್ ಬಂದಿದೆ. ಮುಖ್ಯಮಂತ್ರಿ, ಗೃಹ ಮಂತ್ರಿ, ಡಿಸಿಎಂ, ಮತ್ತು ಬೆಂಗಳೂರು ನಗರ ಪೊಲೀಸ್ ಕಮಿಷನರ್ಗೆ ಬೆದರಿಕೆ ಇ-ಮೇಲ್ ಬಂದಿದ್ದು 2.5 ಮಿಲಿಯನ್ ಡಾಲರ್ ಕೊಟ್ಟಿಲ್ಲ ಅಂದರೆ ರಾಮೇಶ್ವರಂ ಕೆಫೆ ರೀತಿಯಲ್ಲೇ ಬಾಂಬ್ ಸ್ಫೋಟಿಸುವುದಾಗಿ ಇಮೇಲ್ನಲ್ಲಿ ಬೆದರಿಕೆ ಹಾಕಲಾಗಿದೆ.
ಈ ಇಮೇಲ್ ಬೆದರಿಕೆ ಸಂಬಂಧ ಸಿಸಿಬಿ ಪೊಲೀಸರು ಸ್ವಯಂ ಪ್ರೇರಿತ ದೂರು ದಾಖಲಿಸಿಕೊಂಡಿದ್ದಾರೆ. Shahidkhan10786@protonmail.com ಎನ್ನುವ ಮೇಲ್ ಐಡಿಯಿಂದ ಬೆದರಿಕೆ ಬಂದಿದ್ದು, ಸದ್ಯ ಸಿಸಿಬಿ ಪೊಲೀಸರು ಈ ಇಮೇಲ್ ಕುರಿತು ತನಿಖೆ ನಡೆಸಿದ್ದಾರೆ.









































