ಮಂಗಳೂರು : ಕಡಬದ ಆಸಿಡ್ ದಾಳಿ ಸಂತ್ರಸ್ತ ಬಾಲಕಿಯರಿಗೆ ಪ್ರಾಥಮಿಕ ವೈದ್ಯಕೀಯ ಚಿಕಿತ್ಸೆಗಾಗಿ 4 ಲಕ್ಷ ರೂ. ಪರಿಹಾರ ನೀಡಲಾಗುವುದು ಎಂದು ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ. ನಾಗಲಕ್ಷ್ಮೀ ಚೌಧರಿ ತಿಳಿಸಿದ್ದಾರೆ. ಕಡಬದಲ್ಲಿ ಮಾ. 4ರಂದು ಕಿಡಿಗೇಡಿಯಿಂದ ಆ್ಯಸಿಡ್ ದಾಳಿಗೊಳಗಾಗಿ ನಗರದ ಎ.ಜೆ.ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ವಿದ್ಯಾರ್ಥಿನಿಯರನ್ನು ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ. ನಾಗಲಕ್ಷ್ಮಿ ಚೌಧರಿ ಅವರು ಮಾ. 5 ರಂದು ಭೇಟಿ ಮಾಡಿ, ಆರೋಗ್ಯ ವಿಚಾರಿಸಿದರು. ಬಳಿಕ ಸಂತ್ರಸ್ತೆಯರು ಹಾಗೂ ಪೋಷಕರಿಗೆ ಸಾಂತ್ವನ ಹೇಳಿದರು.
ಕಡಬ ಆ್ಯಸಿಡ್ ದಾಳಿ: ಸಂತ್ರಸ್ತ ಬಾಲಕಿಯರಿಗೆ ತಲಾ 4 ಲಕ್ಷ ರೂ ಪರಿಹಾರ: ಮಹಿಳಾ ಆಯೋಗದ ಅಧ್ಯಕ್ಷೆ







































