ಬೆಂಗಳೂರು : ರಾಜ್ಯ ಪಠ್ಯಕ್ರಮ ಅನುಸರಿಸುತ್ತಿರುವ ಸರಕಾರಿ, ಅನುದಾನಿತ ಮತ್ತು ಅನುದಾನ ರಹಿತ ಶಾಲೆಗಳಲ್ಲಿನ 5,8,9 ಮತ್ತು 11 ನೇತರಗತಿಯ ಬೋರ್ಡ್ ಪರೀಕ್ಷೆಯನ್ನು ರದ್ದು ಮಾಡಿ ಹೈಕೋರ್ಟ್ ಆದೇಶ ಹೊರಡಿಸಿದೆ.
ರಾಜ್ಯ ಪಠ್ಯಕ್ರಮದ ಶಾಲೆಗಳ 5, 8, 9 ಹಾಗೂ 11ನೇ ತರಗತಿಗಳ ವಿದ್ಯಾರ್ಥಿಗಳಿಗೆ ಶಾಲಾ ಮಟ್ಟದ ಮೌಲ್ಯಮಾಪನದ ಬದಲಾಗಿ ರಾಜ್ಯ ಮಟ್ಟದ ಮಂಡಳಿ (ಬೋರ್ಡ್) ಪರೀಕ್ಷೆ ನಡೆಸಲು ತೀರ್ಮಾನಿಸಿ ರಾಜ್ಯ ಸರಕಾರ ಈ ಹಿಂದೆ ಸುತ್ತೋಲೆ ಹೊರಡಿಸಿತ್ತು. ಇದನ್ನು ಪ್ರಶ್ನಿಸಿ ಅನುದಾನ ರಹಿತ ಖಾಸಗಿ ಶಾಲೆಗಳ ಒಕ್ಕೂಟ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ರವಿ ಹೊಸಮನಿ ಅವರಿದ್ದ ನ್ಯಾಯಪೀಠ ತೀರ್ಪು ಪ್ರಕಟಿಸಿದೆ.
9ನೇ ತರಗತಿ ಮತ್ತು 11ನೇ ತರಗತಿ ವಿದ್ಯಾರ್ಥಿಗಳಿಗೂ ಪಬ್ಲಿಕ್ ಪರೀಕ್ಷೆ ನಡೆಸುವುದರಿಂದ ವಿದ್ಯಾರ್ಥಿಗಳ ಕಲಿಕೆಯಲ್ಲಿ ಗಂಭೀರತೆ ಕಾಣಬಹುದು ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಮಧುಬಂಗಾರಪ್ಪ ಅವರ ವಾದವಾಗಿತ್ತು.




























































