ದಿಲ್ಲಿಯಲ್ಲಿ ಬಿಡುಗಡೆಯಾಗಲಿದೆ ಅಭ್ಯರ್ಥಿಗಳ ಎರಡನೇ ಪಟ್ಟಿ
ಬೆಂಗಳೂರು: ಈಗಾಗಲೇ 195 ಲೋಕಸಭಾ ಸ್ಥಾನಗಳ ಅಭ್ಯರ್ಥಿಗಳನ್ನು ಘೋಷಿಸಿರುವ ಬಿಜೆಪಿಯ ಇನ್ನೊಂದು ಸುತ್ತಿನ ಮಹತ್ವದ ಸಭೆ ಇಂದು ದಿಲ್ಲಿಯಲ್ಲಿ ನಡೆಯಲಿದೆ. ಇದರಲ್ಲಿ ಎರಡನೇ ಪಟ್ಟಿ ಬಿಡುಗಡೆಯಾಗಲಿದೆ. ಈ ಪಟ್ಟಿಯಲ್ಲಿ ಕರ್ನಾಟಕದ ಎಲ್ಲ 28 ಅಭ್ಯರ್ಥಿಗಳ ಹೆಸರು ಘೋಷಣೆಯಾಗಲಿದೆ ಎಂದು ಬಿಜೆಪಿ ನಾಯಕರು ತಿಳಿಸಿದ್ದಾರೆ.
ರಾಜ್ಯದ 28 ಕ್ಷೇತ್ರದ ಅಭ್ಯರ್ಥಿಗಳ ಪಟ್ಟಿ ಬುಧವಾರ ಬಿಡುಗಡೆಯಾಗಲಿದೆ ಎಂದು ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಹೇಳಿದ್ದಾರೆ.
ಲೋಕಸಭಾ ಚುನಾವಣೆಗೆ ಬಿಜೆಪಿ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆಯಾಗಿದೆ. ಮೊದಲ ಪಟ್ಟಿಯಲ್ಲಿ ಕರ್ನಾಟಕದ ಹೆಸರು ಇರಲಿಲ್ಲ. ಆದರೆ ಬುಧವಾರ ಬಿಡುಗಡೆಯಾಗುವ ಎರಡನೇ ಪಟ್ಟಿಯಲ್ಲಿ ರಾಜ್ಯದ 28 ಲೋಕಸಭಾ ಅಭ್ಯರ್ಥಿಗಳ ಹೆಸರು ಇರಲಿದೆ ಎಂದು ತಿಳಿಸಿದ್ದಾರೆ.
ದಿಲ್ಲಿಯಲ್ಲಿ ಇಂದು ಚುನಾವಣಾ ಸಮಿತಿ ಮೀಟಿಂಗ್ ನಡೆಯಲಿದೆ. ಕರ್ನಾಟಕದ ಅಭ್ಯರ್ಥಿಗಳ ಫೈನಲ್ ಮಾಡುವ ಮೀಟಿಂಗ್ ನಡೆಯಲಿದೆ. ರಾಜ್ಯದ 28 ಕ್ಷೇತ್ರಗಳ ಅಭ್ಯರ್ಥಿಗಳ ತೀರ್ಮಾನ ಆಗಲಿದೆ. ಪಟ್ಟಿ ಬಿಡುಗಡೆಯ ಬಗ್ಗೆ ಪ್ರಧಾನಿ ಮೋದಿ ಹಾಗೂ ಗೃಹ ಸಚಿವ ಅಮಿತ್ ಶಾ ತೀರ್ಮಾನ ಕೈಗೊಳ್ಳಲಿದ್ದಾರೆ ಎಂದಿದ್ದಾರೆ.









































