ಬರಾಸತ್: ‘ಸಂದೇಶ್ಖಾಲಿ ಸುಂಟರಗಾಳಿ’ ಪಶ್ಚಿಮ ಬಂಗಾಳದ ಮೂಲೆ ಮೂಲೆಗೂ ತಲುಪಲಿದೆ ಮತ್ತು ರಾಜ್ಯದಲ್ಲಿ ಆಡಳಿತಾರೂಢ ಟಿಎಂಸಿಯನ್ನು ಛಿದ್ರಗೊಳಿಸುವಲ್ಲಿ ‘ನಾರಿ ಶಕ್ತಿ'(ಮಹಿಳಾ ಶಕ್ತಿ) ಪ್ರಮುಖ ಪಾತ್ರ ವಹಿಸಲಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಬುಧವಾರ ಹೇಳಿದ್ದಾರೆ.
ಮಾ.6ರಂದು ಬರಾಸತ್ ನಲ್ಲಿ ರ್ಯಾಲಿ ಉದ್ದೇಶಿಸಿ ಮಾತನಾಡಿದ ಪ್ರಧಾನಿ ಮೋದಿ, ಸಂದೇಶ್ಖಾಲಿಯಲ್ಲಿ ಮಹಿಳೆಯ ಮೇಲೆ ಲೈಂಗಿಕ ದೌರ್ಜನ್ಯ ನಡೆದಿರುವುದು ನಾಚಿಕೆಗೇಡಿನ ಸಂಗತಿ ಎಂದು ದೀದಿ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು.
“ಟಿಎಂಸಿ ನಾಯಕರು ವಿವಿಧ ಸ್ಥಳಗಳಲ್ಲಿ ಬಡ, ದಲಿತ ಮತ್ತು ಬುಡಕಟ್ಟು ಕುಟುಂಬಗಳ ಸಹೋದರಿಯರ ಮೇಲೆ ದೌರ್ಜನ್ಯ ಎಸಗುತ್ತಿದ್ದಾರೆ. ಇದರಿಂದ ಪಶ್ಚಿಮ ಬಂಗಾಳ ಮತ್ತು ದೇಶದ ಮಹಿಳೆಯರು ಆಕ್ರೋಶಗೊಂಡಿದ್ದಾರೆ. ಸಂದೇಶಖಾಲಿಯ ಈ ಸುಂಟರಗಾಳಿ ಪಶ್ಚಿಮ ಬಂಗಾಳದ ಮೂಲೆ ಮೂಲೆಗೂ ತಲುಪುತ್ತದೆ ಮತ್ತು ರಾಜ್ಯದಾದ್ಯಂತ ಟಿಎಂಸಿಯನ್ನು ನಾಶಪಡಿಸುತ್ತದೆ ಎಂದು ಮೋದಿ ಹೇಳಿದರು.








































