ರಸಪ್ರಶ್ನೆ ಸ್ಪರ್ಧೆ : ಅನ್ವಿಕ ಶೆಟ್ಟಿಗೆ ದ್ವಿತೀಯ ಸ್ಥಾನ

ಕಾರ್ಕಳ : ಸಮಗ್ರ ಶಿಕ್ಷಣ ಕರ್ನಾಟಕ, ಶಾಲಾ ಶಿಕ್ಷಣ ಇಲಾಖೆ, ಜಿಲ್ಲಾ ಶಿಕ್ಷಣ ಮತ್ತು ತರಬೇತಿ ಸಂಸ್ಥೆ ಉಡುಪಿ ಆಶ್ರಯದಲ್ಲಿ ಉಡುಪಿಯಲ್ಲಿ ನಡೆದ ರಾಷ್ಟ್ರೀಯ ಆವಿಷ್ಕಾರ ಕಾರ್ಯಕ್ರಮದ ಪ್ರಾಥಮಿಕ ಹಾಗೂ ಪ್ರೌಢಶಾಲಾ ಮಕ್ಕಳ ಜಿಲ್ಲಾಮಟ್ಟದ ರಸಪ್ರಶ್ನೆ ಸ್ಪರ್ಧೆಯಲ್ಲಿ ಮುನಿಯಾಲು ಕರ್ನಾಟಕ ಪಬ್ಲಿಕ್ ಸ್ಕೂಲ್‌ನ 5ನೇ ತರಗತಿ ವಿದ್ಯಾರ್ಥಿನಿ ಅನ್ವಿಕ ಎಂ. ಶೆಟ್ಟಿ ಕಿರಿಯ ವಿಭಾಗದಲ್ಲಿ ದ್ವಿತೀಯ ಸ್ಥಾನ ಪಡೆದಿದ್ದಾರೆ. ಇವರು ಕಾರ್ಕಳ ತಾಲೂಕು ಮಟ್ಟದಲ್ಲಿ ಪ್ರಥಮ ಸ್ಥಾನ ಪಡೆದು ಜಿಲ್ಲಾಮಟ್ಟಕ್ಕೆ ಆಯ್ಕೆಗೊಂಡಿದ್ದರು.
ಶಾಲಾ ಶಿಕ್ಷಕ ವೃಂದ ಹಾಗೂ ಶಾಲಾ ಅಭಿವೃದ್ಧಿ ಸಮಿತಿಯವರು ಅಭಿನಂದಿಸಿದ್ದಾರೆ.



















































































error: Content is protected !!
Scroll to Top