ಕರ್ನಾಟಕ ಕಗ್ಗಂಟು : ಬಿಡುಗಡೆಯಾಗದ ಬಿಜೆಪಿ ಎರಡನೇ ಪಟ್ಟಿ

ಹೊಸದಿಲ್ಲಿ: ಬಿಜೆಪಿ ಅಭ್ಯರ್ಥಿಗಳ ಎರಡನೇ ಪಟ್ಟಿ ನಿನ್ನೆ ಬಿಡುಗಡೆಯಾಗಬೇಕಿತ್ತು. ಆದರೆ ಕರ್ನಾಟಕದ ಕೆಲವು ಕ್ಷೇತ್ರಗಳು ಕಗ್ಗಂಟಾದ ಕಾರಣ ಪಟ್ಟಿ ಬಿಡುಗಡೆ ವಿಳಂಂಬವಾಗಿದೆ. ಕರ್ನಾಟಕದ ನಾಯಕರ ಜೊತೆ ತಡರಾತ್ರಿವರೆಗೂ ಹೈಕಮಾಂಡ್‌ ಸಭೆ ನಡೆಸಿದೆ. ಇನ್ನೂ ತೀರ್ಮಾನವಾಗದ ಹಿನ್ನೆಲೆಯಲ್ಲಿ ಇಂದು ಅಥವಾ ನಾಳೆ ಪಟ್ಟಿ ಬಿಡುಗಡೆಯಾಗಬಹುದು ಎನ್ನಲಾಗಿದೆ.

ಈ ಬಾರಿ ಲೋಕಸಭೆ ಚುನಾವಣೆಯಲ್ಲಿ 400ಕ್ಕೂ ಅಧಿಕ ಸೀಟ್ ಗುರಿ ಹೊಂದಿರುವ ಬಿಜೆಪಿ, ಅದನ್ನ ಸಾಧಿಸಲು ದಕ್ಷಿಣ ರಾಜ್ಯಗಳ ಮೇಲೆ ಕಣ್ಣಿಟ್ಟಿದೆ. ಕರ್ನಾಟಕದಲ್ಲಿ 25 ಬಿಜೆಪಿ ಸಂಸದರಿದ್ದು ಅದನ್ನ ಉಳಿಸಿಕೊಳ್ಳೋಕೆ ಅಥವಾ ಅದಕ್ಕಿಂತ ಹೆಚ್ಚು ಸ್ಥಾನ ಗೆಲ್ಲಲು ಬಿಜೆಪಿ ಪ್ಲಾನ್ ರೂಪಿಸಿದೆ. ಹೀಗಾಗಿ, ರಾಜ್ಯದ ಪ್ರಮುಖ ನಾಯಕರನ್ನ ದೆಹಲಿಗೆ ಕರೆಸಿಕೊಂಡು ಬುಧವಾರ ಮ್ಯಾರಾಥಾನ್ ಸಭೆ ನಡೆಸಿದೆ. ಸಭೆಯಲ್ಲಿ ಯಡಿಯೂರಪ್ಪ, ಬಿ.ಎಲ್. ಸಂತೋಷ್, ಬಿ.ವೈ. ವಿಜಯೇಂದ್ರ, ಆರ್‌.ಅಶೋಕ್, ಬಸವರಾಜ್ ಬೊಮ್ಮಾಯಿ, ಜಗದೀಶ್ ಶೆಟ್ಟರ್ ಸೇರಿ ಹಲವು ನಾಯಕರು ಭಾಗಿಯಾಗಿದ್ದಾರೆ.

ಈ ಸಭೆಯಲ್ಲಿ ಕೆಲ ಕ್ಷೇತ್ರಗಳ ಅಭ್ಯರ್ಥಿಗಳನ್ನು ಬದಲಾಯಿಸುವ ಬಗ್ಗೆ ಚರ್ಚೆ ನಡೆದಿದೆ. ಈ ಮೊದಲು 11 ಕ್ಷೇತ್ರದಲ್ಲಿ ಬದಲಾವಣೆ ಮಾಡ್ತಾರೆ ಎನ್ನಲಾಗಿತ್ತು. ಆದರೆ, 5 ಲೋಕಸಭಾ ಕ್ಷೇತ್ರಗಳ ಅಭ್ಯರ್ಥಿಗಳನ್ನ ಬದಲಿಸುವ ಬಗ್ಗೆ ನಿನ್ನೆ ಚರ್ಚೆ ನಡೆದಿದೆ. ಬೀದರ್ ಸಂಸದ ಭಗವಂತ ಖೂಬಾ, ದಾವಣಗೆರೆಯ ಜಿ.ಎಂ.ಸಿದ್ದೇಶ್ವರ್, ವಿಜಯಪುರದ ರಮೇಶ್ ಜಿಗಜಿಣಗಿ, ಬೆಳಗಾವಿಯ ಮಂಗಳಾ ಅಂಗಡಿ, ಬೆಂಗಳೂರು ಉತ್ತರ ಕ್ಷೇತ್ರದ ಡಿವಿಎಸ್​ಗೆ ಟಿಕೆಟ್ ಕೈತಪ್ಪುವ ಸಾಧ್ಯತೆ ಇದೆ ಎನ್ನಲಾಗಿದೆ.
ಬೆಂಗಳೂರು ಗ್ರಾಮಾಂತರ ಕ್ಷೇತ್ರಕ್ಕೆ ಅಭ್ಯರ್ಥಿ ಆಯ್ಕೆ ಬಗ್ಗೆ ಗೊಂದಲ ಮುಂದುವರಿದಿದ್ದು, ಸಭೆಯಲ್ಲಿ ಡಾ. ಮಂಜುನಾಥ್ ಮತ್ತು ಸಿ. ಪಿ. ಯೋಗೇಶ್ವರ್ ಹೆಸರು ಪ್ರಸ್ತಾಪವಾಗಿದೆ. ಜೆಡಿಎಸ್​​ ಜೊತೆ ಮೈತ್ರಿಯಾಗಿರೋದ್ರಿಂದ ಜೆಡಿಎಸ್ ನಾಯಕರ ಅಭಿಪ್ರಾಯ ಪಡೆದು ನಿರ್ಧರಿಸಲು ಸಭೆಯಲ್ಲಿ ತೀರ್ಮಾನಿಸಲಾಗಿದೆ.

ಕೆಲ ಹಾಲಿ ಸಂಸದರಿಗೆ ಪಕ್ಷದಲ್ಲೇ ವಿರೋಧವಿದೆ. ಉತ್ತರ ಕನ್ನಡ ಸಂಸದ ಅನಂತ್ ಕುಮಾರ್ ಹೆಗಡೆ, ಬಾಗಲಕೋಟೆ ಸಂಸದ ಪಿ.ಸಿ ಗದ್ದಿಗೌಡರ್, ದಕ್ಷಿಣ ಕನ್ನಡ ಸಂಸದ ನಳಿನ್ ಕುಮಾರ್ ಕಟೀಲ್, ಕೊಪ್ಪಳ ಸಂಸದ ಕರಡಿ ಸಂಗಣ್ಣ, ದಾವಣಗೆರೆ ಸಂಸದ ಜಿ.ಎಂ ಸಿದ್ದೇಶ್ವರ್, ಚಿತ್ರದುರ್ಗ ಸಂಸದ ಎ. ನಾರಾಯಣಸ್ವಾಮಿಗೂ ಸ್ಥಳೀಯರ ವಿರೋಧವಿದೆ. ಇಲ್ಲಿ ಏನು ಮಾಡಬೇಕು ಅನ್ನೋ ಬಗ್ಗೆಯೂ ಸಭೆಯಲ್ಲಿ ಚರ್ಚಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.
ಈ ಮಧ್ಯೆ ಬಿಜೆಪಿ ಜೆಡಿಎಸ್ ಹಾಸನ, ಕೋಲಾರ ಪಡೆಯುವ ಸಾಧ್ಯತೆ ಇದೆ. ಮಂಡ್ಯ ಕ್ಷೇತ್ರಕ್ಕಾಗಿ ಜೆಡಿಎಸ್ ಪಟ್ಟು ಹಿಡಿದಿದೆ. ಮಂಡ್ಯದಲ್ಲಿ ಸಕ್ರಿಯರಾಗಿರುವ ಸಂಸದೆ ಸುಮಲತಾ ಬಿಜೆಪಿ ಟಿಕೆಟ್ ಸಿಗುವ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

























































































































error: Content is protected !!
Scroll to Top