ಗುರಿಯೊಂದಿಗೆ ಮುನ್ನಡೆದಾಗ ಯಶಸ್ಸು ಸಾಧ್ಯ : ಡಾ. ಕೆ. ವಿದ್ಯಾಕುಮಾರಿ

ಕಾರ್ಕಳ : ಪ್ರತಿಯೊಬ್ಬರೂ ಜೀವನದಲ್ಲಿ ನಿರ್ದಿಷ್ಟ ಗುರಿಯನ್ನು ಹೊಂದಿರಬೇಕು, ಆ ಗುರಿಯೇ ಅವರನ್ನು ಯಶಸ್ಸಿನತ್ತ ಕರೆದೊಯ್ಯುತ್ತದೆ. ಶ್ರಮವಹಿಸಿ ಕೆಲಸ ಮಾಡಿದಾಗ ಮಾತ್ರ ಉತ್ತಮ ಬದುಕನ್ನು ರೂಪಿಸಲು ಸಾಧ್ಯ ಎಂದು ಜಿಲ್ಲಾಧಿಕಾರಿ ಡಾ. ಕೆ. ವಿದ್ಯಾಕುಮಾರಿ ಅಭಿಪ್ರಾಯಪಟ್ಟರು.
ನಿಟ್ಟೆ ಮಹಾಲಿಂಗ ಅಡ್ಯಂತಾಯ ಸ್ಮಾರಕ ತಾಂತ್ರಿಕ ಮಹಾವಿದ್ಯಾಲಯದಲ್ಲಿ ಮಹಿಳಾ ದಿನಾಚರಣೆಯ ಅಂಗವಾಗಿ ಮಾ. 7 ರಂದು ನಡೆದ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು ಮಹಿಳಾ ಸಮುದಾಯವನ್ನು ಸಬಲೀಕರಣಗೊಳಿಸುವಲ್ಲಿ ಶಿಕ್ಷಣದ ಮಹತ್ವವನ್ನು ವಿವರಿಸಿದರು.

ನಿಟ್ಟೆ ಡೀಮ್ಡ್ ಟು ಬಿ ಯೂನಿವರ್ಸಿಟಿಯ ತಾಂತ್ರಿಕ ಶಿಕ್ಷಣ ವಿಭಾಗದ ಉಪಾಧ್ಯಕ್ಷ ಡಾ. ಗೋಪಾಲ್ ಮುಗೇರಾಯ ಸಮಾರಂಭದ ಅಧ್ಯಕ್ಷತೆ ವಹಿಸಿ ಕಾರ್ಯಕ್ರಮಕ್ಕೆ ಶುಭಹಾರೈಸಿದರು. ನಿಟ್ಟೆ ತಾಂತ್ರಿಕ ಕಾಲೇಜಿನ ಪ್ರಾಂಶುಪಾಲ ಡಾ. ನಿರಂಜನ್ ಎನ್. ಚಿಪ್ಲುಂಕರ್ ನಿಟ್ಟೆ ಶಿಕ್ಷಣ ಸಂಸ್ಥೆಯ ಬೆಳವಣಿಗೆಯ ಕುರಿತು ಮಾತನಾಡುತ್ತ ಸಭಿಕರ ಗಮನ ಸೆಳೆದರು.
ಕ್ಯಾಂಪಸ್ ನಿರ್ವಹಣೆ ಮತ್ತು ಅಭಿವೃದ್ಧಿ ವಿಭಾಗದ ನಿರ್ದೇಶಕ ಪ್ರೊ. ಎ. ಯೋಗೀಶ್ ಹೆಗ್ಡೆ ಮಾತನಾಡಿ, ಮಹಿಳಾ ದಿನಾಚರಣೆಯ ಮಹತ್ವ ಪ್ರಾಮುಖ್ಯತೆಯ ಕುರಿತು ವಿವರಿಸಿದರು.

ಕಾರ್ಯಕ್ರಮದಲ್ಲಿ ನಿಟ್ಟೆ ವಿಶ್ವವಿದ್ಯಾಲಯದ ಆಫ್ ಕ್ಯಾಂಪಸ್ ಸೆಂಟರ್‌ನ ಉಪಕುಲಸಚಿವೆ ಡಾ. ರೇಖಾ ಭಂಡಾರ್ಕರ್, ಜಸ್ಟಿಸ್ ಕೆ.ಎಸ್.ಹೆಗ್ಡೆ ಇನ್ಸ್ಟಿಟ್ಯೂಟ್ ಆಫ್ ಮ್ಯಾನೇಜ್ ಮೆಂಟ್ ನಿರ್ದೇಶಕ ಡಾ. ಗುರುರಾಜ್ ಕಿದಿಯೂರು, ಎನ್.ಆರ್.ಎ.ಎಂ ಪಾಲಿಟೆಕ್ನಿಕ್ ಕಾಲೇಜಿನ ಪ್ರಾಂಶುಪಾಲ ಪ್ರಶಾಂತ್ ಕುಮಾರ್ ಹೊಳ್ಳ, ಡಾ.ಎನ್.ಎಸ್.ಎ.ಎಂ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲೆ ಡಾ. ವೀಣಾ ಬಿ.ಕೆ., ಡಾ.ಎನ್ ಎಸ್.ಎ.ಎಂ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲೆ ಭವಾನಿ ಶೆಟ್ಟಿ, ಡಾ.ಎನ್.ಎಸ್.ಎ.ಎಂ ಇಂಗ್ಲಿಷ್ ಶಾಲೆಯ ಪ್ರಾಂಶುಪಾಲೆ ರಾಧಾ ಪ್ರಭು ಉಪಸ್ಥಿತರಿದ್ದರು.

ಕಾರ್ಯಕ್ರಮದ ಸಂಯೋಜಕಿ ಡಾ. ವೀಣಾದೇವಿ ಶಾಸ್ತ್ರಿಮಠ ಸ್ವಾಗತಿಸಿದರು. ಎಲೆಕ್ಟ್ರಾನಿಕ್ಸ್ ಮತ್ತು ಕಮ್ಯುನಿಕೇಷನ್ ಎಂಜಿನಿಯರಿಂಗ್ ವಿಭಾಗದ ಸಹ ಪ್ರಾಧ್ಯಾಪಕಿಯರಾದ ಡಾ.ಪದ್ಮಾವತಿ, ಡಾ. ಶ್ರೀವಿದ್ಯಾ ಮತ್ತು ಡಾ. ವಿದ್ಯಾ ಕುಡ್ವ ಪ್ರಾರ್ಥಿಸಿದರು. ಮಾನವಿಕ ವಿಭಾಗದ ಸಹಾಯಕ ಪ್ರಾಧ್ಯಾಪಕಿ ಶ್ವೇತಾ ಭರತ್ ಕಾರ್ಯಕ್ರಮ ನಿರೂಪಿಸಿದರು. ಎಲೆಕ್ಟ್ರಾನಿಕ್ಸ್ ಮತ್ತು ಕಮ್ಯುನಿಕೇಷನ್ ಎಂಜಿನಿಯರಿಂಗ್ ವಿಭಾಗದ ಸಹ ಪ್ರಾಧ್ಯಾಪಕಿ ಡಾ. ಮಮತಾ ಗಿರೀಶ್ ವಂದಿಸಿದರು. ಇನ್ಫೋರ್ಮೇಶನ್ ಸೈನ್ಸ್ ಎಂಜಿನಿಯರಿಂಗ್ ವಿಭಾಗದ ಮುಖ್ಯಸ್ಥೆ ಡಾ. ಅಶ್ವಿನಿ ಬಿ. ಸಹಕರಿಸಿದರು.
ಸಭಾ ಕಾರ್ಯಕ್ರಮದ ನಂತರ, ಬೆಂಗಳೂರಿನ ಅಝಾಯಾ ಡ್ಯಾನ್ಸ್ ಅಕಾಡೆಮಿಯ ಸಹಯೋಗದೊಂದಿಗೆ ಬೆಲ್ಲಿ ಡ್ಯಾನ್ಸ್ ಕುರಿತು ಕಾರ್ಯಾಗಾರ ಮತ್ತು ಸಾಂಸ್ಕೃತಿಕ ಕಾರ್ಯಕ್ರಮ ಜರುಗಿತು.































































































error: Content is protected !!
Scroll to Top