ಗ್ಯಾಸ್‌ ಸಿಲಿಂಡರ್‌ ಬೆಲೆ 100 ರೂ. ಇಳಿಕೆ

ಹೊಸದಿಲ್ಲಿ: ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ ದಿನವೇ ಕೇಂದ್ರ ಸರಕಾರ ಮಹಿಳೆಯರಿಗೆ ಉಡುಗೊರೆ ನೀಡಿದ್ದು, ಎಲ್​​ಪಿಜಿ ಸಿಲಿಂಡರ್ ಬೆಲೆ 100 ರೂ.ಇಳಿಕೆ ಮಾಡಿದೆ. ಈ ವಿಚಾರವಾಗಿ ಸಾಮಾಜಿಕ ಮಾಧ್ಯಮ ಎಕ್ಸ್​ ಮೂಲಕ ಮೋದಿ ಸಂದೇಶ ಪ್ರಕಟಿಸಿದ್ದಾರೆ.
‘ಇಂದು, ಮಹಿಳಾ ದಿನದಂದು, ನಮ್ಮ ಸರ್ಕಾರವು ಎಲ್​ಪಿಜಿ ಸಿಲಿಂಡರ್ ಬೆಲೆಯನ್ನು 100 ರೂ. ಕಡಿಮೆ ಮಾಡುತ್ತಿದೆ. ಇದು ದೇಶದಾದ್ಯಂತ ಲಕ್ಷಾಂತರ ಕುಟುಂಬಗಳ ಮೇಲೆ ಆರ್ಥಿಕ ಹೊರೆಯನ್ನು ಗಮನಾರ್ಹವಾಗಿ ಕಡಿಮೆ ಮಾಡಲಿದೆ. ಈ ನಿರ್ಧಾರವು ವಿಶೇಷವಾಗಿ ನಮ್ಮ ನಾರಿ ಶಕ್ತಿಗೆ ಪ್ರಯೋಜನವನ್ನು ನೀಡಲಿದೆ. ಅಡುಗೆ ಅನಿಲವನ್ನು ಕೈಗೆಟುಕುವ ದರದಲ್ಲಿ ಸಿಗುವಂತೆ ಮಾಡುವ ಮೂಲಕ ನಾವು ಕುಟುಂಬಗಳ ಯೋಗಕ್ಷೇಮವನ್ನು ನೋಡಿಕೊಳ್ಳುತ್ತೇವೆ. ಜತೆಗೆ, ಆರೋಗ್ಯಕರ ವಾತಾವರಣವನ್ನು ಖಚಿತಪಡಿಸಿಕೊಳ್ಳುವ ಗುರಿಯನ್ನು ಹೊಂದಿದ್ದೇವೆ. ಎಂದು ಮೋದಿ ಉಲ್ಲೇಖಿಸಿದ್ದಾರೆ.
ಈ ನಿರ್ಧಾರವು ಮಹಿಳೆಯರನ್ನು ಸಬಲೀಕರಣಗೊಳಿಸುವ ಮತ್ತು ಅವರ ಬದುಕನ್ನು ಸುಲಭಗೊಳಿಸುವುದನ್ನು ಖಾತರಿಪಡಿಸಿಕೊಳ್ಳುವ ನಮ್ಮ ಬದ್ಧತೆಗೆ ಪೂರಕವಾಗಿದೆ ಎಂದು ಮೋದಿ ಹೇಳಿದ್ದಾರೆ.









































































































error: Content is protected !!
Scroll to Top