ನನಗೆ ಟಿಕೆಟ್‌ ತಪ್ಪಿಸಲು ಪಿತೂರಿ ನಡೆಯುತ್ತಿದೆ – ಶೋಭಾ ಕರಂದ್ಲಾಜೆ

ಬೆಳಗಾವಿ : ಲೋಕಸಭೆ ಚುನಾವಣೆಯ ಟಿಕೆಟ್ ತಪ್ಪಿಸಲು ಉಡುಪಿ – ಚಿಕ್ಕಮಗಳೂರು ಕ್ಷೇತ್ರದಲ್ಲಿ ಪಿತೂರಿ ನಡೆಯುತ್ತಿದೆ ಎಂದು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಸ್ಫೋಟಕ ಹೇಳಿಕೆ ನೀಡಿದ್ದಾರೆ. ಬೆಳಗಾವಿಯಲ್ಲಿ ಮಾತನಾಡಿದ ಅವರು, ಯಾವಾಗ ವಿರೋಧ ವ್ಯಕ್ತವಾಗುತ್ತದೆಯೋ ಆಗಲೇ ನಮ್ಮ ನಾಯಕರು ನಮ್ಮ ಬಗ್ಗೆ ಮಾಹಿತಿ ಕಲೆ ಹಾಕುತ್ತಾರೆ. ನಮ್ಮವರು ವಿರೋಧ ಮಾಡಿದ ಕಾರಣಕ್ಕೆ ನನಗೆ ಅನುಕೂಲ ಆಗಿದೆ. ಇಲ್ಲವಾದರೆ ಶೋಭಾ ಒಳ್ಳೆಯ ‌ಕೆಲಸ ಮಾಡ್ತಿದ್ದಾರೆ,‌ ಪಕ್ಷದ ಕೆಲಸ ಮಾಡುತ್ತಾರೆ ಎಂದಷ್ಟೇ ‌ಹೇಳುತ್ತಿದ್ದರು ಎಂದು ಹೇಳಿದ್ದಾರೆ.

ನಮ್ಮ ವ್ಯಕ್ತಿತ್ವವೇನು? ನಮ್ಮ ಅಭಿವೃದ್ಧಿ ಕೆಲಸಗಳು ಗೊತ್ತಾಗುತ್ತವೆ. ನಾವೇನು ಮಾಡಿಲ್ಲ, ಏನನ್ನು ಮಾಡಬಾರದು ಎಂಬುದು ಇಂಥ ವರದಿ ಪಡೆಯುವುದರಿಂದ ಗೊತ್ತಾಗುತ್ತದೆ. ಚುನಾವಣೆ ಸಮಯ ಬಹಳಷ್ಟು ಸೂಕ್ಷ್ಮತೆಯಿಂದ ಕೂಡಿರುತ್ತದೆ. ಮಾಹಿತಿ ಸಂಗ್ರಹದಿಂದ ನನಗೆ ಅನುಕೂಲ ಆಗಲಿದೆಯೇ ಹೊರತು ಕೆಟ್ಟದಾಗಲ್ಲ. ಅದಕ್ಕಾಗಿ ನಮ್ಮ ಹೈಕಮಾಂಡ್‌ ಬಗ್ಗೆ ನನಗೆ ನಂಬಿಕೆಯಿದೆ, ಕೆಲಸದ ಆಧಾರದ ಮೇಲೆ ಟಿಕೆಟ್ ಸಿಗುತ್ತದೆ ಎಂದು ಅವರು ಹೇಳಿದರು.



















































































error: Content is protected !!
Scroll to Top