ಕಾರ್ಕಳ : ಕುಕ್ಕುಂದೂರು ಜೋಡುರಸ್ತೆಯಲ್ಲಿ ಕಾರ್ಯಾಚರಿಸುತ್ತಿರುವ ಶ್ರೀ ದುರ್ಗಾಪರಮೇಶ್ವರಿ ವಿವಿಧೋದ್ದೇಶ ಸಹಕಾರ ಸಂಘದ ನೂತನ ನವೀಕೃತ ಪ್ರಧಾನ ಕಚೇರಿ ಮತ್ತು ಸಭಾಂಗಣದ ಉದ್ಘಾಟನಾ ಸಮಾರಂಭ ಮಾ. 17ರಂದು ಬೆಳಗ್ಗೆ 10.30ಕ್ಕೆ ನಡೆಯಲಿದೆ.
ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಪ್ರಧಾನ ಅರ್ಚಕ ವೇದಮೂರ್ತಿ ಕೆ. ಶಂಕರನಾರಾಯಣ ಭಟ್ ಆಶೀರ್ವಚನ ನೀಡಲಿದ್ದಾರೆ.
ಶಾಸಕ ವಿ. ಸುನಿಲ್ ಕುಮಾರ್ ಉದ್ಘಾಟಿಸಲಿದ್ದು, ಶ್ರೀ ದುರ್ಗಾಪರಮೇಶ್ವರಿ ವಿವಿಧೋದ್ದೇಶ ಸಹಕಾರ ಸಂಘದ ಅಧ್ಯಕ್ಷ ಸಂತೋಷ್ ರಾವ್ ಅಧ್ಯಕ್ಷತೆ ವಹಿಸಲಿದ್ದಾರೆ.
ಮಖ್ಯ ಅತಿಥಿಗಳಾಗಿ ಉಡುಪಿ ಜಿಲ್ಲಾ ಸಹಕಾರ ಯೂನಿಯನ್ ಅಧ್ಯಕ್ಷ ಬಿ. ಜಯಕರ ಶೆಟ್ಟಿ ಇಂದ್ರಾಳಿ, ಸಹಕಾರ ಸಂಘಗಳ ಉಪನಿಬಂಧಕ ರಮೇಶ್ ಹೆಚ್.ಎನ್., ಸಹಕಾರ ಸಂಘಗಳ ಸಹಾಯಕ ಉಪನಿಬಂಧಕ ಅರುಣ್ ಕುಮಾರ್ ಎಸ್.ವಿ., ಉಡುಪಿ ಜಿಲ್ಲಾ ಸಹಕಾರಿ ಭಾರತಿಯ ಅಧ್ಯಕ್ಷ ಬೋಳ ಸದಾಶಿವ ಶೆಟ್ಟಿ, ಲೆಕ್ಕಪರಿಶೋಧಕ ಕೆ. ಕಮಲಾಕ್ಷ ಕಾಮತ್, ಕುಕ್ಕುಂದೂರು ಗ್ರಾ. ಪಂ. ಉಪಾಧ್ಯಕ್ಷ ಉಷಾ ಕೆ. ಉಪಸ್ಥಿತರಿರಲಿದ್ದಾರೆ. ವಿಶೇಷ ಆಹ್ವಾನಿತರಾಗಿ ಚಲನಚಿತ್ರ ನಟ ಅರವಿಂದ್ ಬೋಳಾರ್ ಭಾಗಿಯಾಗಲಿದ್ದಾರೆ.
ಕಾರ್ಯಕ್ರಮಕ್ಕೂ ಪೂರ್ವಭಾವಿಯಾಗಿ ಬೆಳಗ್ಗೆ 9.30ಕ್ಕೆ ಕುಮಾರಿ ಹಂಸಿಕಾ ಜಾಲದ ಮನೆ ಇವರಿಂದ ಸಾಕ್ಸೋಪೋನ್ ವಾದನ ನಡೆಯಲಿದೆ ಎಂದು ಸಂಘದ ಪ್ರಕಟನೆಯಲ್ಲಿ ತಿಳಿಸಿದೆ.









































