ದೆಹಲಿ : ಸಿಎಎ (ಪೌರತ್ವ ತಿದ್ದುಪಡಿ ಕಾಯ್ದೆ) ಜಾರಿಗೊಳಿಸಲು ಕೇಂದ್ರ ಸರಕಾರ ಮಾ. 11ರಂದು ಅಧಿಸೂಚನೆ ಪ್ರಕಟಿಸಿದೆ. ಸಿಎಎ ನಿಯಮಗಳ ಅಧಿಸೂಚನೆ ಹೊರಡಿಸಿದ ಬಳಿಕ ಕೇಂದ್ರ ಸರಕಾರ 2014 ಡಿ.31ರವರೆಗೆ ಭಾರತಕ್ಕೆ ವಲಸೆ ಬಂದಿರುವ ಬಾಂಗ್ಲಾದೇಶ, ಪಾಕಿಸ್ತಾನ ಹಾಗೂ ಅಫ್ಘಾನಿಸ್ತಾನದ ಹಿಂದೂ, ಸಿಖ್, ಜೈನ, ಬುದ್ಧ, ಪಾರ್ಸಿ ಹಾಗೂ ಕ್ರೈಸ್ತರಿಗೆ ದೇಶದ ಪೌರತ್ವ ನೀಡಲಿದೆ. 2019ರಲ್ಲಿ ಅಂಗೀಕಾರವಾಗಿದ್ದ ಈ ಕಾನೂನಿಗೆ ರಾಷ್ಟ್ರಪತಿಗಳ ಅಂಕಿತವೂ ಆಗಿತ್ತು. ಆದರೆ, ದೇಶಾದ್ಯಂತ ತೀವ್ರ ಪ್ರತಿಭಟನೆಗಳು ನಡೆದ ಕಾರಣ ಜಾರಿಗೆ ಅಧಿಸೂಚನೆ ಹೊರಡಿಸಿರಲಿಲ್ಲ.
ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ) ವಿದೇಶಿ ಅಕ್ರಮ ವಲಸಿಗರಿಗೆ ಭಾರತದ ಪೌರತ್ವ ನೀಡಲು ಅವಕಾಶ ಮಾಡಿಕೊಡುತ್ತದೆ. ಭಾರತದ ನೆರೆ ರಾಷ್ಟ್ರಗಳಾದ ಪಾಕಿಸ್ತಾನ, ಅಫ್ಗಾನಿಸ್ತಾನ ಮತ್ತು ಬಾಂಗ್ಲಾದೇಶದಿಂದ ಅಕ್ರಮವಾಗಿ ವಲಸೆ ಬಂದಿರುವ ಮುಸ್ಲಿಮೇತರರಿಗೆ ಧರ್ಮದ ಆಧಾರದಲ್ಲಿ ಪೌರತ್ವ ನೀಡಲಾಗುತ್ತದೆ. ಈ ದೇಶಗಳಿಂದ ಅಕ್ರಮವಾಗಿ ವಲಸೆ ಬಂದಿರುವ ಹಿಂದೂ, ಸಿಖ್, ಬೌದ್ಧ, ಜೈನ, ಪಾರ್ಸಿ ಮತ್ತು ಕ್ರೈಸ್ತ ಧರ್ಮೀಯರಿಗೆ ಮಾತ್ರ ಇದರ ಅನುಕೂಲ ದೊರೆಯಲಿದೆ. ಪೌರತ್ವಕ್ಕೆ ಅರ್ಜಿ ಸಲ್ಲಿಸಿದ ತಕ್ಷ ಅವರಿಗೆಲ್ಲ ಭಾರತದ ಪ್ರಜೆಗೆ ದೊರೆಯುವ ಹಕ್ಕುಗಳು ಮತ್ತು ಸೌಲಭ್ಯಗಳು ದೊರೆಯಲಿದೆ.
ಪೌರತ್ವ ತಿದ್ದುಪಡಿ ಕಾಯ್ದೆ ಅಧಿಸೂಚನೆ ಪ್ರಕಟ







































