ಕಲರ್ ಕಾಟನ್‌ ಕ್ಯಾಂಡಿ ಬ್ಯಾನ್ : ಗೋಬಿ ಮಂಚೂರಿಗೆ ಕೃತಕ ಬಣ್ಣ ಬಳಸುವಂತಿಲ್ಲ

ನಿಯಮ ಉಲ್ಲಂಘಿಸಿದರೆ ರೂ.10 ಲಕ್ಷ ದಂಡ, 7 ವರ್ಷ ಶಿಕ್ಷೆ

ಬೆಂಗಳೂರು : ಕರ್ನಾಟಕದಲ್ಲಿ ಕಲರ್‌ ಕಾಟನ್‌ ಕ್ಯಾಂಡಿ ಬಳಕೆಯನ್ನು ರಾಜ್ಯ ಸರ್ಕಾರ ನಿಷೇಧಿಸಿ ಆದೇಶ ಹೊರಡಿಸಿದೆ. ಕೃತಕ ಬಣ್ಣ ಬಳಸುವುದರಿಂದ ಆರೋಗ್ಯದ ಮೇಲೆ ಭಾರೀ ದುಷ್ಪರಿಣಾಮ ಬೀರುವುದರಿಂದ ಕಲರ್‌ ಕಾಟನ್‌ ಕ್ಯಾಂಡಿಯನ್ನು ನಿಷೇಧಿಸಲಾಗಿದೆ. ಜೊತೆಗೆ ಗೋಬಿ ಮಂಚೂರಿ ತಯಾರಿಸುವಾಗ ಕೃತಕ ಬಣ್ಣ ಬಳಸುವುದನ್ನು ಕೂಡ ನಿಷೇಧಿಸಿ ಸರ್ಕಾರ ಆದೇಶಿಸಿದೆ.

ಮಾ.11 ರಂದು ವಿಕಾಸಸೌಧದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್, ಕರ್ನಾಟಕದಲ್ಲಿ ಕಲರ್ ಕಾಟನ್​ ಕ್ಯಾಂಡಿ ಮಾರಾಟ ಮಾಡುವಂತಿಲ್ಲ ಎಂದು ಹೇಳಿದ್ದಾರೆ. ರಾಜ್ಯಾದ್ಯಂತ ಮಾರಾಟ ಮಾಡುತ್ತಿರುವ ಕಲರ್ ಕಾಟನ್ ಕ್ಯಾಂಡಿ ಹಾಗೂ ಗೋಬಿ ಮಂಚೂರಿಯನ್ ಮಾದರಿಗಳಲ್ಲಿ ಆರೋಗ್ಯಕ್ಕೆ ಮಾರಕವಾದ ಅಂಶ ಹಾಗೂ ಬಳಕೆಯ ಬಣ್ಣ ಸೇರಿದಂತೆ ವ್ಯಸನಕಾರಿ ರಾಸಾಯನಿಕ ಅಂಶಗಳು ಪತ್ತೆಯಾಗಿದ್ದು, ಈ ಅಸುರಕ್ಷಿತ ವಸ್ತುಗಳನ್ನು ಬಳಕೆ ಮಾಡದಂತೆ ಸೂಚಿಸಿದ್ದಾರೆ.

ಕರ್ನಾಟಕ ರಾಜ್ಯ ಆಹಾರ ಸುರಕ್ಷತೆ ಹಾಗೂ ಗುಣಮಟ್ಟ ವಿಭಾಗವು, ಕಾಟನ್‌ ಕ್ಯಾಂಡಿ ಮತ್ತು ಗೋಬಿ ಮಂಚೂರಿ ಮಾದರಿಯನ್ನು ಸಂಗ್ರಹಿಸಿತ್ತು. ಪರೀಕ್ಷೆಗೆ ಒಳಪಡಿಸಿದಾಗ ಇವುಗಳಲ್ಲಿ ಕೃತಕ ಬಣ್ಣಗಳ ಬಳಸಿರುವುದು ಪತ್ತೆಯಾಗಿದೆ. ಕಲಬೆರಕೆ ಕಲರ್ ಬಳಕೆ ಮಾಡೋದು ಮತ್ತು ಕ್ಯಾನ್ಸರ್ ಕಾರಕ ಅಂಶಗಳು ಪತ್ತೆಯಾಗಿದೆ. ಮಂಚೂರಿ ಹಾಗೂ ಕಾಟನ್ ಕ್ಯಾಂಡಿಯಲ್ಲಿ ಕೃತಕ ಬಣ್ಣ ಬೆರಕೆ ಹಿನ್ನೆಲೆ ಈ ಹಿಂದೆ ವಿವಿಧ ಸ್ಯಾಂಪಲ್ ಗಳ ಪರೀಕ್ಷೆಗೆ ನೀಡಲಾಗಿತ್ತು. ಪರೀಕ್ಷೆಯ ವರದಿ ಬಂದ ಹಿನ್ನೆಲೆಯಲ್ಲಿ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅಧಿಕೃತ ಆದೇಶ ಹೊರಡಿಸಿದ್ದಾರೆ.



















































































error: Content is protected !!
Scroll to Top