ಬಸ್​ ಮೇಲೆ ಹೈಟೆನ್ಷನ್ ತಂತಿ ಬಿದ್ದು ಹೊತ್ತಿಕೊಂಡ ಬೆಂಕಿ : 6 ಮಂದಿ ಸಜೀವ ದಹನ

ಉತ್ತರ ಪ್ರದೇಶ : ಗಾಜಿಪುರದಲ್ಲಿ ಭಾರಿ ಅಪಘಾತ ಸಂಭವಿಸಿದೆ, ಬಸ್​ ಮೇಲೆ ಹೈ ಟೆನ್ಷನ್ ತಂತಿ ಬಿದ್ದ ಪರಿಣಾಮ ಬೆಂಕಿ ಹೊತ್ತಿಕೊಂಡಿದ್ದು, 6 ಮಂದಿ ಸಜೀವ ದಹನವಾಗಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ. ಸ್ವಲ್ಪ ಸಮಯದಲ್ಲೇ ಬೆಂಕಿ ಭೀಕರ ಸ್ವರೂಪ ಪಡೆದುಕೊಂಡಿದ್ದು, ಬಸ್ ಸಂಪೂರ್ಣ ಬೆಂಕಿಗೆ ಆಹುತಿಯಾಗಿದೆ. ಮಾಹಿತಿ ಪ್ರಕಾರ ಬೆಂಕಿಯಲ್ಲಿ ಆರು ಮಂದಿ ಸಜೀವ ದಹನವಾಗಿದ್ದಾರೆ. ಈ ಅವಘಡದಲ್ಲಿ ಹೆಚ್ಚಿನ ಸಾವು ನೋವು ಸಂಭವಿಸಿರು ಸಾಧ್ಯತೆ ಇದೆ.

ಮದುವೆ ಸಮಾರಂಭ ಮುಗಿಸಿ ಹಿಂದಿರುಗುತ್ತಿದ್ದ ವೇಳೆ ಮರ್ದಾದಲ್ಲಿ ಅಪಘಾತ ಸಂಭವಿಸಿದೆ. ಡಿಎಂ, ಎಸ್​ಪಿ ಸೇರಿದಂತೆ ಹಲವು ಅಧಿಕಾರಿಗಳು ಸ್ಥಳಕ್ಕೆ ಆಗಮಿಸಿದ್ದಾರೆ. ಬಸ್​ನಲ್ಲಿ 35ಕ್ಕೂ ಹೆಚ್ಚು ಮಂದಿ ಇದ್ದರು ಎನ್ನುವ ಮಾಹಿತಿ ಲಭ್ಯವಾಗಿದೆ. ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಸ್ಪಂಧಿಸಿ, ಸ್ಥಳಕ್ಕೆ ಆಗಮಿಸಿ ಪರಿಹಾರ ಕಾರ್ಯ ಆರಂಭಿಸುವಂತೆ ಅಧಿಕಾರಿಗಳಿಗೆ ಸೂಚಿಸಿದ್ದಾರೆ.













































































error: Content is protected !!
Scroll to Top