ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ವಿಟ್ಲ ಸಮೀಪದ ಅಡ್ಯನಡ್ಕ ಕರ್ನಾಟಕ ಬ್ಯಾಂಕ್ ಶಾಖೆಯಲ್ಲಿ ಭಾರೀ ಕಳ್ಳತನ ನಡೆದಿತ್ತು. ಇದೀಗ ಪ್ರಕರಣಕ್ಕೆ ಸಂಬಂಧಿಸಿದಂತೆ ಕೋಟ್ಯಂತರ ನಗದು ಮತ್ತು ಚಿನ್ನಾಭರಣ ದೋಚಿದ್ದ ಮೂವರವನ್ನು ಪುತ್ತೂರು ಉಪವಿಭಾಗದ ಪೊಲೀಸರ ತಂಡ ಬಂಧಿಸಿದೆ. ಬಂಟ್ವಾಳದ ಮಹಮ್ಮದ್ ರಫೀಕ್ ( 35 ), ಮಂಜೇಶ್ವರದ ಇಬ್ರಾಹಿಂ ಕಲಂದರ್ (41) ಹಾಗೂ ಮಂಜೇಶ್ವರದ ದಯಾನಂದ ಎಸ್ (37) ಬಂಧಿತರು. ಘಟನೆ ನಡೆದು ಒಂದು ತಿಂಗಳ ಬಳಿಕ ಆರೋಪಿಗಳನ್ನು ಪೊಲೀಸರು ಬಂಧಿಸಲಾಗಿದೆ.
ಮಂಗಳೂರು: ಕರ್ಣಾಟಕ ಬ್ಯಾಂಕ್ನಲ್ಲಿ ಕೋಟ್ಯಂತರ ನಗದು, ಚಿನ್ನಾಭರಣ ದೋಚಿದ್ದ ಮೂವರ ಬಂಧನ







































