ಕುಮ್ಕಿ ಜಾಗದವರಿಗೂ ಹಕ್ಕುಪತ್ರ ನೀಡುವತ್ತ ಚಿಂತನೆ – ಸುನಿಲ್ ಕುಮಾರ್
ಕಾರ್ಕಳ : ಸರಕಾರಿ ಜಾಗದಲ್ಲಿ ವಾಸವಿರುವರಿಗೆ ಡೀಮ್ಡ್ ಫಾರೆಸ್ಟ್ ಸಮಸ್ಯೆ ನಿವಾರಿಸಿ ಕಳೆದ ಎರಡು ವರ್ಷಗಳಿಂದ ಹಕ್ಕು ಪತ್ರ ವಿತರಿಸುವ ಪ್ರಕ್ರಿಯೆ ನಡೆಯುತ್ತಿದೆ. ಆದರೆ ಕುಮ್ಕಿ ಜಾಗದಲ್ಲಿದ್ದವರಿಗೆ ಹಕ್ಕು ಪತ್ರ ವಿತರಣೆಯಾಗಿಲ್ಲ. ಉಡುಪಿ ಮತ್ತು ದ.ಕ. ಜಿಲ್ಲೆಯಲ್ಲಿ ಕುಮ್ಕಿಯ ವ್ಯವಸ್ಥೆಯಿದ್ದು, ಈ ನಿಟ್ಟಿನಲ್ಲಿ ಸರಕಾರದ ಗಮನ ಸೆಳೆದು ಹಕ್ಕು ಪತ್ರ ವಿತರಿಸಲಾಗುವುದು ಎಂದು ಶಾಸಕ ವಿ. ಸುನಿಲ್ ಕುಮಾರ್ ಅಭಿಪ್ರಾಯ ವ್ಯಕ್ತಪಡಿಸಿದರು.

ಅವರು ಮಾ.೧೧ ರಂದು ತಾಲೂಕು ಪಂಚಾಯತ್ ಸಭಾಂಗಣದಲ್ಲಿ ನಡೆದ ಹಕ್ಕು ಪತ್ರ ಮತ್ತು ವಿವಿಧ ಸವಲತ್ತು ವಿತರಣೆ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದರು.


73 ಮಂದಿಗೆ 94ಸಿ ಹಕ್ಕುಪತ್ರ ಹಾಗೂ ಅರ್ಹ ಫಲಾನುಭವಿಗಳಿಗೆ ಕಾರ್ಮಿಕ ಕಿಟ್‌ಗಳನ್ನು ವಿತರಿಸಲಾಯಿತು. ತಹಶೀಲ್ದಾರ್ ನರಸಪ್ಪ ಸ್ವಾಗತಿಸಿ, ಪ್ರಾಸ್ತಾವಿಕವಾಗಿ ಮಾತನಾಡಿದರು. ಪುರಸಭಾ ಮುಖ್ಯಾಧಿಕಾರಿ ರೂಪ ಟಿ. ಶೆಟ್ಟಿ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಪುಷ್ಪ ಪ್ರಾರ್ಥಿಸಿದರು. ಕಂದಾಯ ನಿರೀಕ್ಷಕ ರಿಯಾಜ್ ಕಾರ್ಯಕ್ರಮ ನಿರೂಪಿಸಿದರು. ಇಓ ಗುರುಶಾಂತಪ್ಪ ವಂದಿಸಿದರು.















































