ಆ್ಯಸಿಡ್ ದಾಳಿ : ಇನ್ನಿಬ್ಬರು ಆರೋಪಿಗಳು ಸೆರೆ

ಮಂಗಳೂರು: ಕಡಬದ ಸರಕಾರಿ ಕಾಲೇಜಿನಲ್ಲಿ ಮೂವರು ವಿದ್ಯಾರ್ಥಿನಿಯರ ಮೇಲೆ ಆ್ಯಸಿಡ್ ಎರಚಿದ ಪ್ರಕರಣಕ್ಕೆ ಸಂಬಂಧಿಸಿ ಕೇರಳದ ಇನ್ನಿಬ್ಬರನ್ನು ಮಂಗಳವಾರ ಪೊಲೀಸರು ವಶಪಡಿಸಿಕೊಂಡಿದ್ದಾರೆ.
ಪ್ರಧಾನ ಆರೋಪಿ ಕೇರಳ ಮೂಲದ ಎಂಬಿಎ ವಿದ್ಯಾರ್ಥಿ ಅಭಿನ್‌ನನ್ನು ಘಟನೆ ನಡೆದ ಮಾ. 5ರಂದು ಬಂಧಿಸಲಾಗಿತ್ತು. ಉಪ್ಪಿನಂಗಡಿ ವೃತ್ತ ನಿರೀಕ್ಷಕರ ನೇತೃತ್ವದ ತಂಡ ಪ್ರಧಾನ ಆರೋಪಿ ಜತೆ ಕೇರಳದ ಎರ್ನಾಕುಲಂ ಮತ್ತು ತಮಿಳುನಾಡಿನ ಕೊಯಮತ್ತೂರಿನ ಪ್ರದೇಶಕ್ಕೆ ತೆರಳಿ ತನಿಖೆ ನಡೆಸಿತ್ತು. ಇದೀಗ ಕೇರಳದಲ್ಲಿ ಇಬ್ಬರನ್ನು ವಶಕ್ಕೆ ಪಡೆದು ಕಡಬಕ್ಕೆ ಕರೆತಂದಿದ್ದಾರೆ. ಆರೋಪಿ ಅಬಿನ್ ಆ್ಯಸಿಡ್ ದಾಳಿ ನಡೆಸಿದ ದಿನ ಕಾಲೇಜಿನ ಸಮವಸ್ತ್ರ ಹೋಲುವ ಡ್ರೆಸ್ ಹಾಕಿದ್ದು, ಇದನ್ನು ಹೊಲಿದುಕೊಟ್ಟ ವ್ಯಕ್ತಿ ಹಾಗೂ ಆ್ಯಸಿಡ್ ನೀಡಿದ ವ್ಯಕ್ತಿಗಳಿಬ್ಬರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ವಿದ್ಯಾರ್ಥಿನಿಯೊಬ್ಬಳನ್ನು ಆರೋಪಿ ಪ್ರೀತಿಸುತ್ತಿದ್ದ. ಆದರೆ ಆಕೆ ಅವನ ಪ್ರೀತಿಯನ್ನು ಒಪ್ಪಿಕೊಂಡಿರಲಿಲ್ಲ. ಈ ಸೇಡಿನಲ್ಲಿ ಮಲ್ಲಪ್ಪುರಂನಿಂದ ಬಂದು ಆ್ಯಸಿಡ್ ಎರಚಿದ್ದ. ಇದು ಪೂರ್ವಯೋಜಿತ ದಾಳಿ ಎಂದು ಪೊಲೀಸರು ತಿಳಿಸಿದ್ದಾರೆ. ಈ ನಡುವೆ ಆ್ಯಸಿಡ್ ದಾಳಿಗೆ ಒಳಗಾದ ಸಂತ್ರಸ್ತ ವಿದ್ಯಾರ್ಥಿನಿಯರು ಇನ್ನೂ ಆಸ್ಪತ್ರೆಯಿಂದ ಬಿಡುಗಡೆಯಾಗಿಲ್ಲ.







































































error: Content is protected !!
Scroll to Top