ರಾಜ್ಯ ಸರಕಾರಿ ನೌಕರರ ತುಟ್ಟಿ ಭತ್ಯೆ ಹೆಚ್ಚಳಕ್ಕೆ ಅನುಮೋದನೆ

ಬೆಂಗಳೂರು : ರಾಜ್ಯ ಸರಕಾರಿ ನೌಕರರಿಗೆ ಸಿದ್ದರಾಮಯ್ಯ ನೇತೃತ್ವದ ಸರಕಾರ ಸಿಹಿ ಸುದ್ದಿ ನೀಡಿದೆ. ಸರಕಾರಿ ನೌಕರರ ತುಟ್ಟಿ ಭತ್ಯೆಯನ್ನು ಶೇ.3.75ರಷ್ಟು ಹೆಚ್ಚಳಕ್ಕೆ ಸರಕಾರ ನಿರ್ಧರಿಸಿದೆ. ಇನ್ನು, ಕೇಂದ್ರ ವೇತನ ನೀತಿಯಂತೆ ವೇತನ ಪಡೆಯುವ ಸರ್ಕಾರಿ ನೌಕರರ ತುಟ್ಟಿ ಭತ್ಯೆಯನ್ನು ಶೇ.4ರಷ್ಟು ಏರಿಸಿದೆ. ಇದರಿಂದ ರಾಜ್ಯದ ಬೊಕ್ಕಸಕ್ಕೆ ಪ್ರತಿ ವರ್ಷ 1792.71 ಕೋಟಿ ರೂ. ಹೆಚ್ಚುವರಿ ಹೊರೆ ಬೀಳಲಿದೆ ಎಂದು ಹೇಳಲಾಗಿದೆ.

ಸದ್ಯ ರಾಜ್ಯ ಸರಕಾರಿ ನೌಕರರಿಗೆ ಶೇ.38.75ರಷ್ಟು ತುಟ್ಟಿ ಭತ್ಯೆ ಇತ್ತು. ಅದನ್ನು ಈಗ ಶೇ.42.5ಕ್ಕೆ ಹೆಚ್ಚಿಸಲು ಸರಕಾರ ನಿರ್ಧರಿಸಿದೆ. ಅದರಂತೆ ಕೇಂದ್ರ ವೇತನ ನೀತಿಯಂತೆ ವೇತನ ಪಡೆಯುವವರ ತುಟ್ಟಿ ಭತ್ಯೆಯನ್ನು ಶೇ.46 ರಿಂದ ಶೇ.50ಕ್ಕೆ ಏರಿಸುವುದಾಗಿ ಸರಕಾರ ತಿಳಿಸಿದೆ. ಜನವರಿ 1 ರಿಂದಲೇ ತುಟ್ಟಿ ಭತ್ಯೆ ಹೆಚ್ಚಳ ಪೂರ್ವಾನ್ವಯ ಆಗಲಿದೆ ಎಂದು ಸರ್ಕಾರ ಆದೇಶ ಹೊರಡಿಸಿದೆ.

ಕೆಲ ದಿನಗಳ ಹಿಂದಷ್ಟೇ ರಾಜ್ಯ ಸರಕಾರಿ ನೌಕರರ ಸಂಘ ರಾಜ್ಯ ಸರಕಾರದ ಮುಂದೆ ಶೇ. 4ರಷ್ಟು ತುಟ್ಟಿ ಭತ್ಯೆಯನ್ನು ಹೆಚ್ಚಳ ಮಾಡುವಂತೆ ಬೇಡಿಕೆ ಇಟ್ಟಿತ್ತು. ಕೇಂದ್ರ ಸರಕಾರವು ಶೇ.4ರಷ್ಟು ತುಟ್ಟಿ ಭತ್ಯೆ ಹೆಚ್ಚಿಸಿ, ಜನವರಿ 1ರಂತೆ ಪೂರ್ವಾನ್ವಯವಾಗುವಂತೆ ಆದೇಶ ಹೊರಡಿಸಿತ್ತು. ಅದೇ ರೀತಿ ಕರ್ನಾಟಕದಲ್ಲೂ ತುಟ್ಟಿ ಭತ್ಯೆಯನ್ನು ಜನವರಿ 1ರಿಂದ ಪೂರ್ವಾನ್ವಯವಾಗುವಂತೆ ಹೆಚ್ಚಿಸಲು ರಾಜ್ಯ ಸರ್ಕಾರಕ್ಕೆ ನೌಕರರ ಸಂಘ ಪತ್ರ ಬರೆದು ಮನವಿ ಸಲ್ಲಿಸಿತ್ತು.



















































































error: Content is protected !!
Scroll to Top