ಜಯಪ್ರಕಾಶ್‌ ಹೆಗ್ಡೆ ಇಂದು ಕಾಂಗ್ರೆಸ್‌ಗೆ ಮರುಸೇರ್ಪಡೆ

ಉಡುಪಿ : ರಾಜ್ಯ ಹಿಂದುಳಿದ ವರ್ಗಗಳ ಶಾಶ್ವತ ಆಯೋಗದ ಮಾಜಿ ಅಧ್ಯಕ್ಷ ಜಯಪ್ರಕಾಶ್‌ ಹೆಗ್ಡೆ ಇಂದು ಅಧಿಕೃತವಾಗಿ ಕಾಂಗ್ರೆಸ್‌ಗೆ ಮರುಸೇರ್ಪಡೆಯಾಗಲಿದ್ದಾರೆ. ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿ ಸಂಜೆ 4 ಗಂಟೆಗೆ ಕಾಂಗ್ರೆಸ್ ಪಕ್ಷಕ್ಕೆ ಅವರನ್ನು ಬರಮಾಡಿಕೊಳ್ಳೂವ ಸಮಾರಂಭ ನಡೆಯಲಿದೆ. ಉಡುಪಿ-ಚಿಕ್ಕಮಗಳೂರು ಕ್ಷೇತ್ರದ ಕಾಂಗ್ರೆಸ್‌ ಅಭ್ಯರ್ಥಿಯಾಗುವ ಉದ್ದೇಶದಿಂದ ಅವರು ಕಾಂಗ್ರೆಸ್‌ ಸೇರುತ್ತಿದ್ದಾರೆ.

ಜಯಪ್ರಕಾಶ್‌ ಹೆಗ್ಡೆ ಈ ಹಿಂದೆ ಆಗಿನ ಬ್ರಹ್ಮಾವರ ವಿಧಾನಸಭಾ ಕ್ಷೇತ್ರದಿಂದ ಗೆದ್ದು ಉಡುಪಿ ಜಿಲ್ಲೆಯ ಮೊದಲ ಜಿಲ್ಲಾ ಉಸ್ತುವಾರಿ ಸಚಿವರಾಗಿಯೂ ಸೇವೆ ಸಲ್ಲಿಸಿದ್ದರು. ಅನಂತರ ಕಾಂಗ್ರೆಸ್ ಸೇರಿ 2012ರಲ್ಲಿ ನಡೆದ ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಗೆದ್ದು ಸಂಸದರಾಗಿದ್ದರು. 2014ರ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದಿಂದ ಸ್ಪರ್ಧೆ ಮಾಡಿದ್ದರು.
ಬಳಿಕ ಕಾಂಗ್ರೆಸ್ ಬಿಟ್ಟು ಬಿಜೆಪಿಗೆ ಸೇರಿಕೊಂಡಿದ್ದರು. ಬಿಜೆಪಿ ಸರಕಾರ ಇದ್ದಾಗ ಇವರನ್ನು ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷರಾಗಿ ನೇಮಿಸಿ ಕ್ಯಾಬಿನೆಟ್‌ ದರ್ಜೆಯ ಸ್ಥಾನಮಾನವನ್ನು ನೀಡಿತ್ತು. ಅವರು ಸಾಮಾಜಿಕ, ಶೈಕ್ಷಣಿಕ ಸ್ಥಿತಿಗತಿ ಅಧ್ಯಯನ ವರದಿಯನ್ನು ಇತ್ತೀಚಿಗಷ್ಟೇ ಸರಕಾರಕ್ಕೆ ಸಲ್ಲಿಸಿದರು. ಆಯೋಗದ ಅಧ್ಯಕ್ಷ ಅವಧಿ ಮುಗಿದ ಆನಂತರ ಕಾಂಗ್ರೆಸ್ ಸೇರುವ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರೊಂದಿಗೆ ಚರ್ಚೆ ನಡೆಸಿದ್ದರು.







































































error: Content is protected !!
Scroll to Top