ಕೋಟ ಪ್ರಾಮಾಣಿಕತೆಗೆ ಮನ್ನಣೆ : ವಿಖ್ಯಾತ್ ಶೆಟ್ಟಿ

ಕಾರ್ಕಳ : ಉಡುಪಿ – ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿ ಕೋಟ ಶ್ರೀನಿವಾಸ್ ಪೂಜಾರಿ ಒಮ್ಮತದ ಅಭ್ಯರ್ಥಿಯಾಗಿ ಆಯ್ಕೆಯಾಗಿದ್ದಾರೆ. ಅವರ ಪ್ರಾಮಾಣಿಕತೆಯನ್ನು ಗುರುತಿಸಿ ಪಕ್ಷದ ಹೈಕಮಾಂಡ್‌ ಟಿಕೆಟ್‌ ನೀಡಿದೆ. ಗ್ರಾಮ ಪಂಚಾಯತ್‌ ಸದಸ್ಯನೋರ್ವ ಬಿಜೆಪಿಯಲ್ಲಿ ಉನ್ನತ ಸ್ಥಾನ ಅಲಂಕರಿಸಬಹುದು ಎನ್ನುವುದಕ್ಕೆ ಇದೇ ಸಾಕ್ಷಿ ಎಂದು ಬಿಜೆಪಿ ಯುವ ಮೋರ್ಚಾ ರಾಜ್ಯ ಕಾರ್ಯದರ್ಶಿ ವಿಖ್ಯಾತ್‌ ಶೆಟ್ಟಿ ಬಣ್ಣಿಸಿದ್ದಾರೆ.

ಕೋಟ ಅವರಿಗೆ ಟಿಕೆಟ್‌ ದೊರೆತ ಬಗ್ಗೆ ಹರ್ಷ ವ್ಯಕ್ತಪಡಿಸಿದ ವಿಖ್ಯಾತ್‌ ಅವರು ಸರಳ, ಸಜ್ಜನಿಕೆಯ ಕೋಟ ಶ್ರೀನಿವಾಸ್‌ ಪೂಜಾರಿ ಅವರು ಸರ್ವ ಪಕ್ಷದವರಿಂದಲೂ ಗೌರವಿಸಲ್ಪಡುವ ಅಪರೂಪದ ರಾಜಕಾರಣಿ. ಗ್ರಾಮ ಪಂಚಾಯತ್ ಸದಸ್ಯರಾಗಿ, ತಾಲೂಕು ಪಂಚಾಯತ್ ಸದಸ್ಯರಾಗಿ, ಜಿಲ್ಲಾ ಪಂಚಾಯತ್ ಸದಸ್ಯರಾಗಿ, ವಿಧಾನ ಪರಿಷತ್ ಸದಸ್ಯರಾಗಿ, ಸಚಿವರಾಗಿ, ವಿಧಾನ ಪರಿಷತ್‌ ವಿರೋಧ ಪಕ್ಷದ ನಾಯಕರಾಗಿ ಹಂತ ಹಂತವಾಗಿ ಬೆಳೆದ ಕೋಟ ಶ್ರೀನಿವಾಸ ಪೂಜಾರಿ ತಾನು ನಿಭಾಯಿಸಿದ ಎಲ್ಲ ಹುದ್ದೆಗಳಿಗೂ ನ್ಯಾಯ ಒದಗಿಸಿಕೊಟ್ಟವರು.
ಹಮ್ಮು ಬಿಮ್ಮು ಇಲ್ಲದ, ದ್ವೇಷರಹಿತ ರಾಜಕಾರಣಿ ಕೋಟ ಅವರನ್ನು ಪ್ರಚಂಡ ಬಹುಮತಗಳಿಂದ ಗೆಲ್ಲಿಸುವ ಕಾರ್ಯವಾಗಬೇಕಿದೆ ಎಂದು ವಿಖ್ಯಾತ್‌ ಶೆಟ್ಟಿ ಅಭಿಪ್ರಾಯಪಟ್ಟರು.









































































































error: Content is protected !!
Scroll to Top