ವಿದ್ಯಾವಂತ ಯುವ ಸಮುದಾಯ ದೇಶದ ಆಸ್ತಿ – ಎಸ್‌. ಎಲ್. ಭೋಜೆಗೌಡ

ಕಾರ್ಕಳ : ಸಮಾಜಕ್ಕೆ ಮಾರ್ಗದರ್ಶನ ನೀಡುವ ಶಿಕ್ಷಣದ ಪಠ್ಯಕ್ರಮ ರಚನೆಯಾಗಿ, ಜೀವನ ಮೌಲ್ಯಗಳನ್ನು ಅಳವಡಿಸುವಂತಾಗಲಿ ಎಂದು ನೈಋತ್ಯ ಶಿಕ್ಷಕರ ಕ್ಷೇತ್ರದ ವಿಧಾನ ಪರಿಷತ್‌ ಸದಸ್ಯ ಎಸ್‌. ಎಲ್. ಭೋಜೆಗೌಡ ಅಭಿಪ್ರಾಯ ವ್ಯಕ್ತಪಡಿಸಿದರು. ಅವರು ಕ್ರಿಯೇಟಿವ್‌ ನಿನಾದ ಸಂಚಿಕೆ-6 ಬಿಡುಗಡೆಯ ಕಾರ್ಯಕ್ರಮದಲ್ಲಿ ಭಾಗವಹಿಸಿ ವಿದ್ಯಾರ್ಥಿಗಳನ್ನುದ್ಧೇಶಿಸಿ ಮಾತನಾಡಿದರು. ವಿದ್ಯಾವಂತ ಸಮಾಜವು ದೇಶದ ಆಸ್ತಿ, ಯುವ ಸಮುದಾಯ ಶೈಕ್ಷಣಿಕ ಜೀವನದಲ್ಲಿ ಶಿಕ್ಷಣದ ಜೊತೆಗೆ ಮೌಲ್ಯಾಧಾರಿತ ಸಾಹಿತ್ಯಿಕ ಗುಣಗಳನ್ನು ಅಳವಡಿಸಿಕೊಂಡು ಉನ್ನತಿಯನ್ನು ಪಡೆಯುವಲ್ಲಿ ಪ್ರಯತ್ನಿಸಬೇಕು ಎಂದರು.

ಸಾಹಿತ್ಯ ಮತ್ತು ಸಾಂಸ್ಕೃತಿಕ ಕ್ಷೇತ್ರ ಬೆಳೆಯಬೇಕಾದರೆ ವಿದ್ಯಾರ್ಥಿಗಳು ಹೆಚ್ಚಿನ ಸಂಖ್ಯೆಯಲ್ಲಿ ಸಾಹಿತ್ಯದ ಅಧ್ಯಯನ ನಡೆಸಬೇಕು. ಹಿರಿಯರ ಜೀವನಾದರ್ಶನವನ್ನು ಅನುಸರಿಸಬೇಕು. ಆಗ ಮಾತ್ರ ಬದುಕಿನ ಹೊಸತನಗಳು ತೆರೆದುಕೊಳ್ಳುತ್ತವೆ ಹಾಗೂ ಜೀವನವನ್ನು ಧೈರ್ಯದಿಂದ ಎದುರಿಸುವ ದೃಢತೆ ನಮ್ಮಲ್ಲಿ ಉಂಟಾಗುತ್ತದೆ ಎಂದು ಕನ್ನಡ ಸಾಹಿತ್ಯ ಪರಿಷತ್ತು ಕಾರ್ಕಳ ಘಟಕದ ಅಧ್ಯಕ್ಷ ಕೊಂಡಳ್ಳಿ ಪ್ರಭಾಕರ ಶೆಟ್ಟಿ ತಿಳಿಸಿದರು.

ಈ ಸಂದರ್ಭ ಕ.ಸಾ.ಪ.ದ ವಿವಿಧ ಪದಾಧಿಕಾರಿಗಳು, ಕ್ರಿಯೇಟಿವ್‌ ಶಿಕ್ಷಣ ಪ್ರತಿಷ್ಠಾನದ ಸಂಸ್ಥಾಪಕರಾದ ಅಶ್ವತ್‌ ಎಸ್.ಎಲ್.‌, ಅಮೃತ್‌ ರೈ, ಗಣಪತಿ ಭಟ್‌ ಕೆ.ಎಸ್‌, ಉಪನ್ಯಾಸಕ ಮತ್ತು ಉಪನ್ಯಾಸಕೇತರ ವೃಂದದವರು ಉಪಸ್ಥಿತರಿದ್ದರು. ಕನ್ನಡ ಉಪನ್ಯಾಸಕ ರಾಮಕೃಷ್ಣ ಹೆಗಡೆ ಕಾರ್ಯಕ್ರಮ ನಿರ್ವಹಿಸಿದರು.









































error: Content is protected !!
Scroll to Top