ಹನುಮಾನ್ ಚಾಲಿಸಾ ಪಠಣ ಕೇಸ್ – ನಗರತ್ ​ಪೇಟೆಯಲ್ಲಿ ಉದ್ವಿಗ್ನ ಪರಿಸ್ಥಿತಿ

ಬೆಂಗಳೂರು : ನಗರತ್​ಪೇಟೆಯಲ್ಲಿ ಮೊಬೈಲ್ ಅಂಗಡಿಯಲ್ಲಿ ಹನುಮಾನ್ ಚಾಲಿಸಾ ಹಾಡು ಹಾಕಿದ್ದಕ್ಕೆ ಯುವಕನ ಮೇಲೆ ಹಲ್ಲೆ ನಡೆಸಿರುವ ಘಟನೆಗೆ ಸಂಬಂಧಿಸಿದಂತೆ ನಗರದಲ್ಲಿಂದು ಹಿಂದೂಪರ ಸಂಘಟನೆಗಳು ಶಕ್ತಿ ಪ್ರದರ್ಶನಕ್ಕೆ ಮುಂದಾಗಿದ್ದು, ಇದರಿಂದಾಗಿ ನಗರತ್ ಪೇಟೆಯಲ್ಲಿ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿದೆ. ಹಿಂದೂಪರ ಸಂಘಟನೆಗಳು ಹಲ್ಲೆಗೊಳಗಾದ ಯುವಕ ಮುಖೇಶ್ ಅಂಗಡಿಯಿಂದ ಭಾಗವಧ್ವಜದೊಂದಿಗೆ ಹನುಮಾನ್ ಚಾಲೀಸ ಪಠಣ ಮಾಡಿಕೊಂಡು ಶಾಂತಿಯುತ ಮೆರವಣಿಗೆಯಲ್ಲಿ ಹಮ್ಮಿಕೊಂಡಿದ್ದರು.

ಮೆರವಣಿಗೆಯಲ್ಲಿ ನೂರಾರು ಸಂಖ್ಯೆಯ ಹಿಂದೂಪರ ಕಾರ್ಯಕರ್ತರು ನಗರತ್ ಪೇಟೆಗೆ ಸೇರಿದ್ದರು. ಈ ಮೆರವಣಿಗೆಗೆ ಬಿಜೆಪಿ ನಾಯಕರಾದ ಸುರೇಶ್ ಕುಮಾರ್ ಹಾಗೂ ಶೋಭಾ ಕರಂದ್ಲಾಜೆ ಕೂಡ ಭಾಗಿಯಾಗಿದ್ದರು. ಆದರೆ, ಇದಕ್ಕೆ ಪೊಲೀಸರು ಅವಕಾಶ ನೀಡದ ಹಿನ್ನೆಲೆಯಲ್ಲಿ ಪೊಲೀಸರು ಹಾಗೂ ಹಿಂದೂಪರ ಸಂಘಟನೆಯ ಕಾರ್ಯಕರ್ತರೊಂದಿಗೆ ಮಾತಿನ ಚಕಮಕಿ ನಡೆಯಿತು. ಬಳಿಕ ಪೊಲೀಸರು ಶೋಭಾ ಕರಂದ್ಲಾಜೆ ಸೇರಿದಂತೆ ಹಲವು ಹಿಂದೂಪರ ಸಂಘಟನೆಗಳ ಕಾರ್ಯಕರ್ತರನ್ನು ವಶಕ್ಕೆ ಪಡೆದರು.

ಘಟನೆ
ಮಾ.17 ರಂದು ಸಂಜೆ 6:30ರ ಸುಮಾರಿಗೆ ನರ್ಗತ್‌ಪೇಟೆಯಲ್ಲಿರುವ ಮೊಬೈಲ್ ಸ್ಪೇರ್ ಪಾರ್ಟ್ಸ್ ಅಂಗಡಿ ಬಳಿ ಐದಾರು ಹುಡುಗರು ಬಂದು ನಮಾಜ್ ಟೈಂನಲ್ಲಿ ಹನುಮಾನ್ ಚಾಲೀಸ್ ಹಾಕುತ್ತೀಯಾ ಎಂದು ಕಿರಿಕ್‌ ತೆಗೆದಿದ್ದರು. ಈ ವೇಳೆ ಮುಖೇಶ್‌ ಎಂಬಾತನನ್ನು ಅಂಗಡಿಯಿಂದ ಹೊರಗೆಳೆದು ನೆಲಕ್ಕೆ ಕೆಡವಿ ಕಾಲಿನಿಂದ ಒದ್ದು ಹಲ್ಲೆ ಮಾಡಿದ್ದಾರೆ.

ಹಲ್ಲೆಗೊಳಗಾದ ಮುಖೇಶ್‌ ಕೂಡಲೇ ಹಲಸೂರು ಗೇಟ್ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದರು. ಆದರೆ ಆರಂಭದಲ್ಲಿ ಪೊಲೀಸರು ಎಫ್ಐಆರ್ ಮಾಡಲು ಹಿಂದೇಟು ಹಾಕುತ್ತಿದ್ದಾರೆಂದು ಆಕ್ರೋಶ ವ್ಯಕ್ತವಾಗಿತ್ತು. ಹೀಗಾಗಿ ತಡರಾತ್ರಿ ಹಲಸೂರು ಗೇಟ್ ಪೊಲೀಸ್ ಠಾಣೆ ಮುಂದೆ ನೂರಾರು ಜನರು ಜಮಾಯಿಸಿದ್ದರು. ಮುಂಜಾಗ್ರತಾ ಕ್ರಮವಾಗಿ ಠಾಣೆ ಮುಂದೆ ಕೆಎಸ್‌ಆರ್‌ಪಿ ತುಕಡಿಯನ್ನು ನಿಯೋಜನೆ ಮಾಡಲಾಗಿತ್ತು. ಪೊಲೀಸರು ಎಫ್ಐಆರ್ ಮಾಡುವವರೆಗೂ ಇಲ್ಲಿಂದ ತೆರಳುವುದಿಲ್ಲ ಎಂದು ಎಚ್ಚರಿಕೆ ನೀಡಿದರು. ಜನಾಕ್ರೋಶ ಹೆಚ್ಚಾಗುತ್ತಿದ್ದಂತೆ ಪೊಲೀಸರು ಎಫ್‌ಐಆರ್‌ ದಾಖಲಿಸಿ, ಐವರನ್ನು ಬಂಧಿಸಿದ್ದರು.































































































































































error: Content is protected !!
Scroll to Top