ಕಡಾರಿ ಕ್ರಾಸ್‌ನಲ್ಲಿ ತೆಂಗಿನಕಾಯಿ ಸಾಗಿಸುತ್ತಿದ್ದ ಟೆಂಪೊ ಪಲ್ಟಿ

ಕಾರ್ಕಳ : ತೆಂಗಿನಕಾಯಿ ಸಾಗಿಸುತ್ತಿದ್ದ ಟೆಂಪೋ ಪಲ್ಟಿಯಾಗಿ ಓರ್ವ ಮೃತಪಟ್ಟ ಘಟನೆ ಮಾಳ ಗ್ರಾಮದ ಕಡಾರಿ ಕ್ರಾಸ್‌ನಲ್ಲಿ ಮಾ. 21ರಂದು ಸಂಭವಿಸಿದೆ. ಹೆಜಮಾಡಿಯಿಂದ ಮಾಳದೆಡೆಗೆ ತೆಂಗಿನಕಾಯಿ ಸಾಗಿಸುತ್ತಿದ್ದ ಟೆಂಪೋ ಚಾಲಕನ ನಿಯಂತ್ರಣ ತಪ್ಪಿ ಕಡಾರಿ ಕ್ರಾಸ್‌ನಲ್ಲಿ ಪಲ್ಟಿಯಾಗಿದೆ. ಪರಿಣಾಮವಾಗಿ ಐವರು ಗಾಯಗೊಂಡಿದ್ದು, ಚಿಕಿತ್ಸೆಗಾಗಿ ಕಾರ್ಕಳ ಸರಕಾರಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆಗೆ ಸ್ಪಂದಿಸದೆ ಓರ್ವ ಮೃತಪಟ್ಟಿರುತ್ತಾರೆ.
ಟೆಂಪೋದಲ್ಲಿ ಚಾಲಕ ಸೇರಿದಂತೆ ಒಟ್ಟು 7 ಮಂದಿ ಪ್ರಯಾಣಿಸುತ್ತಿದ್ದರು. ಇನ್ನಷ್ಟು ಹೆಚ್ಚಿನ ಮಾಹಿತಿ ತಿಳಿದು ಬರಬೇಕಾಗಿದೆ.

















































error: Content is protected !!
Scroll to Top