ಲೋಕಸಭೆ ಚುನಾವಣೆ ಹಿನ್ನೆಲೆ ಪಿಎಸ್‌ಐ ನೇಮಕಾತಿ ಲಿಖಿತ ಪರೀಕ್ಷೆ ಮುಂದೂಡಿಕೆ

ಬೆಂಗಳೂರು : ಲೋಕಸಭೆ ಚುನಾವಣೆ ಹಿನ್ನೆಲೆ 402 ಪಿಎಸ್‌ಐ ಹುದ್ದೆಗಳ ಲಿಖಿತ ಪರೀಕ್ಷೆ ಮುಂದೂಡಿಕೆ ಮಾಡಲಾಗಿದೆ. ಮೇ 8 ರಂದು ನಿಗದಿಯಾಗಿದ್ದ ಪಿಎಸ್​ಐ ನೇಮಕಾತಿ ಪರೀಕ್ಷೆಯನ್ನು ಮುಂದೂಡಿಕೆ ಮಾಡಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಆದೇಶ ಹೊರಡಿಸಿದೆ. ಅಲ್ಲದೆ, ಶೀಘ್ರದಲ್ಲೇ ಮುಂದಿನ ದಿನಾಂಕವನ್ನು ಪ್ರಾಧಿಕಾರದ ವೆಬ್​ಸೈಟ್​ನಲ್ಲಿ ಪ್ರಕಟಿಸುವುದಾಗಿ ತಿಳಿಸಿದೆ.

2021ನೇ ಸಾಲಿನಲ್ಲಿ ಅಧಿಸೂಚಿಸಿದ್ದ ಹುದ್ದೆಗಳು ಇದಾಗಿದ್ದು, ಮೇ 8 ರಂದು ಲಿಖಿತ ಪರೀಕ್ಷೆ ನಡೆಸಲು ದಿನಾಂಕ ನಿಗದಿ ಮಾಡಲಾಗಿತ್ತು. ಈ ವೇಳಾಪಟ್ಟಿಗೆ ಯಾವುದೇ ಆಕ್ಷೇಪಣೆ ಹಾಗೂ ಆಡಳಿತಾತ್ಮಕ ಸಮಸ್ಯೆಗಳು ಎದುರಾಗದಿದ್ದಲ್ಲಿ ಇದೇ ದಿನಾಂಕದಂದು ಪರೀಕ್ಷೆ ನಡೆಸಲು ನಿರ್ಧರಿಸಲಾಗಿತ್ತು.





























































































































error: Content is protected !!
Scroll to Top