ವಾಟ್ಸಾಪ್​ನಲ್ಲಿ ವಿಕಸಿತ ಭಾರತ ಸಂದೇಶಗಳನ್ನು ನಿಲ್ಲಿಸಲು ಕೇಂದ್ರ ಚುನಾವಣಾ ಆಯೋಗ ಸೂಚನೆ

ದೆಹಲಿ : ವಾಟ್ಸಾಪ್​ನಲ್ಲಿ ವಿಕಸಿತ ಭಾರತ ಅಭಿಯಾನ ನಿಲ್ಲಿಸಲು ಸರಕಾರ ಕೇಂದ್ರ ಚುನಾವಣಾ ಆಯೋಗ ಸೂಚನೆ ನೀಡಿದೆ. ಕಳೆದ ಕೆಲವು ದಿನಗಳಿಂದ ದೇಶಾದ್ಯಂತ ಜನರಿಗೆ ವಾಟ್ಸಾಪ್​ನಲ್ಲಿ ವಿಕಸಿತ ಭಾರತಕ್ಕೆ ಸಂಬಂಧಿಸಿದ ಸಂದೇಶ ರವಾನೆಯಾಗುತ್ತಿದೆ. ಈ ಸಂದೇಶವು ನರೇಂದ್ರ ಮೋದಿ ಸರಕಾರವನ್ನು ಉತ್ತೇಜಿಸುತ್ತಿದೆ.

ಇದೀಗ ಕೇಂದ್ರ ಚುನಾವಣಾ ಆಯೋಗವು ತಕ್ಷಣವೇ ಜಾರಿಗೆ ಬರುವಂತೆ ಈ ಸಂದೇಶಗಳನ್ನು ಕಳುಹಿಸುವುದನ್ನು ನಿಲ್ಲಿಸುವಂತೆ ಎಲೆಕ್ಟ್ರಾನಿಕ್ಸ್ ಮತ್ತು ಮಾಹಿತಿ ತಂತ್ರಜ್ಞಾನ ಸಚಿವಾಲಯಕ್ಕೆ ಸೂಚನೆ ನೀಡಿದೆ. ನೀತಿ ಸಂಹಿತೆ ಜಾರಿಯಲ್ಲಿದ್ದರೂ ದೇಶದ ನಾಗರಿಕರ ಮೊಬೈಲ್ ಫೋನ್ ಗಳಿಗೆ ಇಂತಹ ಸಂದೇಶಗಳು ರವಾನೆಯಾಗುತ್ತಿರುವುದು ತಿಳಿದು ಬಂದಿದೆ ಎಂದು ಚುನಾವಣಾ ಆಯೋಗ ಹೇಳಿದೆ.

ಮಾರ್ಚ್ 16 ರಂದು ಮಾದರಿ ನೀತಿ ಸಂಹಿತೆ ಜಾರಿಗೆ ಬರುವ ಮೊದಲು ಪ್ರಧಾನಿ ನರೇಂದ್ರ ಮೋದಿಯವರ ಸಂದೇಶಗಳನ್ನು ಕಳುಹಿಸಲಾಗಿದೆ ಎಂದು ಸಚಿವಾಲಯವು ಆಯೋಗಕ್ಕೆ ತಿಳಿಸಿತ್ತು. ನೆಟ್‌ವರ್ಕ್ ಸಮಸ್ಯೆಯಿಂದಾಗಿ ಅವರಿಗೆ ತಲುಪುವುದು ವಿಳಂಬವಾಗಿರಬಹುದು ಎಂದು ಸಚಿವಾಲಯವು ಆಯೋಗಕ್ಕೆ ಮಾಹಿತಿ ನೀಡಿದೆ.
ಈ ಸಂದೇಶಕ್ಕೆ ಕಾಂಗ್ರೆಸ್ ಮತ್ತು ತೃಣಮೂಲ ಕಾಂಗ್ರೆಸ್ ಆಕ್ಷೇಪ ವ್ಯಕ್ತಪಡಿಸಿದೆ. ಇದು ಮಾದರಿ ನೀತಿ ಸಂಹಿತೆಯ ಉಲ್ಲಂಘನೆಯಾಗಿದ್ದು, ಇದರ ವಿರುದ್ಧ ಕ್ರಮ ಕೈಗೊಳ್ಳುವಂತೆ ಮನವಿ ಮಾಡಿದೆ.





























































































































error: Content is protected !!
Scroll to Top