ಮಗು ಅಕ್ರಮ ದತ್ತು : ನಟಿ ಬಂಧನ

ಬೆಂಗಳೂರು : ಬಿಗ್ ಬಾಸ್ ಕನ್ನಡ ಒಟಿಟಿ ಸೀಸನ್ ಮೂಲಕ ಫೇಮಸ್ ಆದ ನಟಿ, ಮೋಡೆಲ್‌ ಸೋನು ಶ್ರೀನಿವಾಸ್ ಗೌಡ ಅವರನ್ನು ಮಗುವನ್ನು ಅಕ್ರಮವಾಗಿ ದತ್ತು ತೆಗೆದುಕೊಂಡ ಪ್ರಕರಣಕ್ಕೆ ಸಂಬಂಧಿಸಿ ಪೊಲೀಸರು ಬಂಧಿಸಿದ್ದಾರೆ. ಕಾನೂನು ಬಾಹಿರವಾಗಿ ಅವರು ಮಗುವನ್ನು ದತ್ತು ಪಡೆದಿದ್ದು, ಇತ್ತೀಚೆಗೆ ಮಗುವಿನ ಫೋಟೊ ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದರು. ನಂತರ ಅವರ ವಿರುದ್ಧ ಕೇಸ್‌ ದಾಖಲಾಗಿತ್ತು.

ಏಳು ವರ್ಷದ ಮಗುವನ್ನು ನಟಿ ಕಾನೂನು ಬಾಹಿರವಾಗಿ ಅವರು ದತ್ತು ಪಡೆದಿದ್ದರು. ಈ ಪ್ರಕರಣಕ್ಕೆ ಸಂಬಂಧಿಸಿ ರಾಜ್ಯ ಮಕ್ಕಳ ರಕ್ಷಣಾ ಘಟಕದ ಅಧಿಕಾರಿ ಗೀತಾ ದೂರು ನೀಡಿದ್ದರು. ಬ್ಯಾಡರಹಳ್ಳಿ ಪೊಲೀಸ್ ಠಾಣೆಯಲ್ಲಿ ಎಫ್​ಐಆರ್​ ದಾಖಲಿಸಿಕೊಂಡು ಬಂಧಿಸಿದ್ದಾರೆ.
ನಾನು ಅಪಾರ್ಟ್​ಮೆಂಟ್ ಕೆಳಗೆ ನಾಯಿಗೆ ಬಿಸ್ಕಿಟ್ ಹಾಕುವಾಗ ಇವಳು ಸಿಕ್ಕಿದ್ದಳು. ಅವಳಿಗೆ ಚಾಕೋಲೇಟ್ ಕೊಡಿಸಿದೆ. ನಂತರ ಶಾಪಿಂಗ್ ಹೋದೆವು. ಮನೆಗೆ ಕರೆದುಕೊಂಡು ಹೋಗಿ ಎಂದು ಕೇಳಿದಳು. ನಾನು ದತ್ತು ತೆಗೆದುಕೊಳ್ಳುವುದಕ್ಕೂ ಮೊದಲೇ ಅವಳಿಗೆ ಚೈನ್ ಕೊಡಿಸಿದ್ದೆ ಎಂದು ಸೋನು ಶ್ರೀನಿವಾಸ್ ಗೌಡ ಸೋಷಿಯಲ್‌ ಮೀಡಿಯಾದಲ್ಲಿ ಹೇಳಿಕೊಂಡಿದ್ದರು.









































































































error: Content is protected !!
Scroll to Top