5, 8, 9 ಮತ್ತು 11ನೇ ತರಗತಿ ಬೋರ್ಡ್ ಪರೀಕ್ಷೆಗೆ ಹೈಕೋರ್ಟ್​​ ಅಸ್ತು

ಬೆಂಗಳೂರು : ರಾಜ್ಯದ ಪಠ್ಯಕ್ರಮ ಅನುಸರಿಸುವ ಸರಕಾರಿ, ಅನುದಾನಿತ ಮತ್ತು ಅನುದಾನ ರಹಿತ ಶಾಲೆಗಳ 5, 8, 9 ಮತ್ತು 11ನೇ ತರಗತಿ ಬೋರ್ಡ್ ಪರೀಕ್ಷೆಗೆ ಕರ್ನಾಟಕ ಹೈಕೋರ್ಟ್ ಅನುಮತಿ ನೀಡಿದೆ. ನ್ಯಾಯಮೂರ್ತಿ ಕೆ. ಸೋಮಶೇಖರ್ ಹಾಗೂ ನ್ಯಾಯಮೂರ್ತಿ ಕೆ. ರಾಜೇಶ್ ರೈ ಅವರಿದ್ದ ವಿಭಾಗೀಯ ಪೀಠ ಬೋರ್ಡ್ ಪರೀಕ್ಷೆಗೆ ಅನುಮತಿ ನೀಡಿ ಆದೇಶಿಸಿದೆ.

ಬೋರ್ಡ್ ಪರೀಕ್ಷೆ ನಡೆಸುವ ಕರ್ನಾಟಕ ಸರ್ಕಾರದ ಆದೇಶ ಪ್ರಶ್ನಿಸಿ ಖಾಸಗಿ ಶಾಲೆಗಳ ಒಕ್ಕೂಟ ರೂಪ್ಸಾ ಕರ್ನಾಟಕ ಹೈಕೋರ್ಟ್ ಮೆಟ್ಟಿಲೇರಿತ್ತು. ಆದರೆ, ಕೋರ್ಟ್ ವಿಭಾಗೀಯ ಪೀಠ ಬೋರ್ಡ್ ಪರೀಕ್ಷೆಗಳನ್ನು ನಡೆಸಲು ಅನುಮತಿ ನೀಡಿತ್ತು. ಈ ಆದೇಶವನ್ನು ಪ್ರಶ್ನಿಸಿ ಮೇಲ್ಮನವಿ ಸಲ್ಲಿಸಲಾಗಿತ್ತು. ವಿಚಾರಣೆ ನಡೆಸಿದ ಸುಪ್ರೀಂಕೋರ್ಟ್, ವಿಭಾಗೀಯ ಪೀಠದ ಆದೇಶಕ್ಕೆ ತಡೆ ನೀಡಿತ್ತು. ಅಲ್ಲದೆ, ಮೇಲ್ಮನವಿ ವಿಚಾರಣೆ ಪೂರ್ಣಗೊಳಿಸಲು ಸುಪ್ರೀಂಕೋರ್ಟ್ ಸೂಚಿಸಿತ್ತು.

ಅದರಂತೆ, ವಿಚಾರಣೆ ನಡೆಸಿದ ಹೈಕೋರ್ಟ್ ವಿಭಾಗೀಯ ಪೀಠ, ಬೋರ್ಟ್ ಪರೀಕ್ಷೆಗಳನ್ನು ನಡೆಸಲು ಅನುಮತಿ ನೀಡಿದ್ದು, ಸ್ಥಗಿತಗೊಂಡಿರುವ ಪರೀಕ್ಷೆ ಮುಂದುವರಿಸಲು ಸೂಚನೆ ನೀಡಿದೆ.

ಈಗಾಗಲೇ ಪರೀಕ್ಷೆ ಇದೆ, ಇಲ್ಲ ಎನ್ನುವ ಆದೇಶಗಳ ನಡುವೆ ಎರಡು ಮೂರು ಪರೀಕ್ಷೆಗಳು ಮುಗಿದಿವೆ. ಇದೇ ಮಾ. 11ರಿಂದ ಆರಂಭವಾಗಿದ್ದ ಪರೀಕ್ಷೆಗಳನ್ನು ಸುಪ್ರೀಂಕೋರ್ಟ್ ಆದೇಶದಂತೆ ಮಾ. 13ರಂದು ಸ್ಥಗಿತಗೊಳಿಸಲಾಗಿತ್ತು. ಅಂದು ಪರೀಕ್ಷೆಗಳನ್ನು ಮುಂದೂಡದೇ ಇದ್ದಿದ್ದರೆ, 5ನೇ ತರಗತಿಗೆ ಮಾರ್ಚ್ 14ರಂದು, 8 ಹಾಗೂ 9ನೇ ತರಗತಿಗೆ ಮಾ. 16ರಂದು ಪರೀಕ್ಷೆಗಳು ಮುಗಿಯುತ್ತಿದ್ದವು. ಮಕ್ಕಳು ಬೇಸಿಗೆ ರಜೆಗೆ ತೆರಳುತ್ತಿದ್ದರು. ಪರೀಕ್ಷೆಗಳು ಪೂರ್ಣಗೊಳ್ಳದೇ ಪೋಷಕರು ಹಾಗೂ ವಿದ್ಯಾರ್ಥಿಗಳು ಅತಂತ್ರ ಸ್ಥಿತಿಯಲ್ಲಿ ಇದ್ದಾರೆ.

































































































error: Content is protected !!
Scroll to Top