ಶಿಕ್ಷಣದ ಧ್ರುವತಾರೆ ಮುದ್ರಾಡಿ ಕೃಷ್ಣ ಡಿ. ಶೆಟ್ಟರು – ಅಶೋಕ್ ಕುಮಾರ್ ಶೆಟ್ಟಿ

ಹೆಬ್ರಿ : ಗ್ರಾಮೀಣ ಭಾಗದ ಮಕ್ಕಳು ಶಿಕ್ಷಣದಿಂದ ವಂಚಿತರಾಗಬಾರದು ಎನ್ನುವ ಸದುದ್ದೇಶದಿಂದ ಊರಿನಲ್ಲಿಯೇ ಪ್ರೌಢಶಾಲೆಯನ್ನು ತನ್ನ ಮಾತಾಪಿತರ ನೆನಪಿನಲ್ಲಿ ಕಟ್ಟಿ ಬೆಳೆಸಿದವರು ಕೃಷ್ಣ ಡಿ. ಶೆಟ್ಟರು. ದೂರದ ಮುಂಬಯಿನಲ್ಲಿದ್ದರೂ ತನ್ನೂರಿನ ಮಕ್ಕಳಿಗೆ ಉತ್ತಮ ಗುಣಮಟ್ಟದ ಶಿಕ್ಷಣ ದೊರೆಯುವತ್ತ ಚಿಂತಿಸಿದ ಅವರು ಸುಸಜ್ಜಿತ ಕಟ್ಟಡ, ಆಟದ ಮೈದಾನ ಸೇರಿ ಎಲ್ಲ ಸೌಕರ್ಯಗಳನ್ನು ಒದಗಿಸಿಕೊಡುವ ಮೂಲಕ ವಿದ್ಯಾರ್ಥಿಗಳ ಪಾಲಿನ ಧ್ರುವತಾರೆಯಾಗಿ ಬೆಳಗಿದರು ಎಂದು ಶಾಲಾ ಆಡಳಿತ ಮಂಡಳಿಯ ಕಾರ್ಯದರ್ಶಿ ಅಶೋಕ್ ಕುಮಾರ್ ಶೆಟ್ಟಿ ಅಭಿಪ್ರಾಯ ವ್ಯಕ್ತಪಡಿಸಿದರು.

ಅವರು ಮುದ್ರಾಡಿ ಎಂ.ಎನ್.ಡಿ.ಎಸ್.ಎಂ. ಅನುದಾನಿತ ಪ್ರೌಢಶಾಲೆಯಲ್ಲಿ ಶಾಲಾ ಸಂಸ್ಥಾಪಕರ ದಿನಾಚರಣೆ ಅಂಗವಾಗಿ ಕೀರ್ತಿಶೇಷ ಮುದ್ರಾಡಿ ಕೃಷ್ಣ ಡಿ. ಶೆಟ್ಟಿಯವರ ಮಕ್ಕಳು ವಿದ್ಯಾರ್ಥಿಗಳ ಪ್ರತಿಭಾ ಅನಾವರಣಕ್ಕೆ ಪ್ರೋತ್ಸಾಹ ಕೊಡುವ ಉದ್ದೇಶದಿಂದ ಸ್ಥಾಪಿಸಿದ ಶಾಶ್ವತ ನಿಧಿಯಿಂದ ಪ್ರಶಸ್ತಿ ಪತ್ರ ಮತ್ತು ನಗದು ಪುರಸ್ಕಾರ ವಿತರಿಸಿ, ಅಧ್ಯಕ್ಷತೆ ವಹಿಸಿ ಮಾತನಾಡಿದರು. ಶಾಲಾ ಮುಖ್ಯ ಶಿಕ್ಷಕಿ ಇಂದಿರಾ ಬಾಯರಿ ಪ್ರಾಸ್ತಾವಿಕವಾಗಿ ಮಾತನಾಡಿ ಸ್ವಾಗತಿಸಿದರು. ಶಿಕ್ಷಕಿ ಶ್ಯಾಮಲಾ ಕೊಠಾರಿ ಬಹುಮಾನ ವಿಜೇತರ ಪಟ್ಟಿ ವಾಚಿಸಿದರು. ಶಿಕ್ಷಕರಾದ ಪಿ. ವಿ. ಆನಂದ ಸಾಲಿಗ್ರಾಮ, ರಘುಪತಿ ಹೆಬ್ಬಾರ್, ಶಿಕ್ಷಕೇತರ ಸಿಬ್ಬಂದಿ ಮಹೇಶ್, ವಿದ್ಯಾರ್ಥಿಗಳು ಉಪಸ್ಥಿತರಿದ್ದರು. ಶಿಕ್ಷಕ ಬಲ್ಲಾಡಿ ಚಂದ್ರಶೇಖರ ಭಟ್ ಕಾರ್ಯಕ್ರಮ ನಿರೂಪಿಸಿ, ಮಹೇಶ್ ನಾಯ್ಕ್ ವಂದಿಸಿದರು.

































































































error: Content is protected !!
Scroll to Top