ಜೆಡಿಎಸ್‌ಗೆ ಕೋಲಾರ ಸೇರಿ 3 ಕ್ಷೇತ್ರ – ಬಿಜೆಪಿ ಅಧಿಕೃತ ಘೋಷಣೆ

ಬೆಂಗಳೂರು : ಜೆಡಿಎಸ್-ಬಿಜೆಪಿ ದೋಸ್ತಿಗಳಿಗೆ ಕಗ್ಗಂಟಾಗಿದ್ದ ಕೋಲಾರ ಕ್ಷೇತ್ರವನ್ನು ಕೊನೆಗೂ ಬಿಜೆಪಿಯು ಜೆಡಿಎಸ್ ಪಕ್ಷಕ್ಕೆ ಬಿಟ್ಟುಕೊಟ್ಟಿದೆ. ಮಾ. 23ರಂದು ಅರಮನೆ ಮೈದಾನದ ಸಭಾಂಗಣದಲ್ಲಿ ನಡೆದ ರಾಜ್ಯ ಮಟ್ಟದ ಕಾರ್ಯಾಗಾರದಲ್ಲಿ ರಾಜ್ಯ ಚುನಾವಣಾ ಉಸ್ತುವಾರಿ ರಾಧಾ ಮೋಹನದಾಸ್ ಅಗರ್ವಾಲ್ ಘೋಷಣೆ ಮಾಡಿದ್ದಾರೆ.

ಕೋಲಾರ ಸೀಟು ಜೆಡಿಎಸ್‍ಗೆ ಬಿಟ್ಟು ಕೊಟ್ಟಿದ್ದೇವೆ. ಈ ಮೂಲಕ ಜೆಡಿಎಸ್‍ಗೆ ಮೂರು ಸೀಟು ಬಿಟ್ಟು ಕೊಟ್ಟಿದ್ದೇವೆ ಎಂದು ಹೇಳಿದ್ದಾರೆ. ಕೋಲಾರ, ಹಾಸನ, ಮಂಡ್ಯ ಕಾರ್ಯಕರ್ತರು ಒಟ್ಟಾಗಿ ಕೆಲಸ ಮಾಡಿ. ನಿಮಗೆ ಕೈ ಮುಗಿದು ಕೇಳಿಕೊಳ್ತೀನಿ, ಪ್ರಧಾನಿ ಮೋದಿಗಾಗಿ ಕೆಲಸ ಮಾಡಿ. ನಿಮ್ಮ ವೈಯಕ್ತಿಕ ಮುನಿಸು ಏನೇ ಇದ್ರೂ ಬಿಟ್ಟುಬಿಡಿ. ಮೂರು ಕ್ಷೇತ್ರದ ಕಾರ್ಯಕರ್ತರು ಒಗ್ಗಟ್ಟಾಗಿ ಕೆಲಸ ಮಾಡಿ ಎಂದು ಮನವಿ ಮಾಡಿಕೊಂಡಿದ್ದಾರೆ.

ಅಭ್ಯರ್ಥಿ ಆಯ್ಕೆಯಲ್ಲಿ ಹಸ್ತಕ್ಷೇಪವಿಲ್ಲ
ಬಿಜೆಪಿ 25 ಅಭ್ಯರ್ಥಿಗಳ ಆಯ್ಕೆ ಮಾಡಿದೆ. ಜೆಡಿಎಸ್‍ಗೆ ಮೂರು ಕ್ಷೇತ್ರ ಬಿಟ್ಟು ಕೊಟ್ಟಿದ್ದೇವೆ. ಅಭ್ಯರ್ಥಿ ಯಾರಾಗಾಬೇಕು ಅಂತ ನಾವು ಹಸ್ತಕ್ಷೇಪ ಮಾಡಿಲ್ಲ. ಆದರೆ ಒಟ್ಟಾಗಿ ಕೆಲಸ ಮಾಡಿ ಎಂದು ತಿಳಿಸಿದ್ದಾರೆ.







































error: Content is protected !!
Scroll to Top