ವಿವಿಧ ಶಕ್ತಿ ಕೆಂದ್ರಗಳಲ್ಲಿ ಪೂರ್ವಭಾವಿ ಸಭೆ
ಕಾರ್ಕಳ : ಉಡುಪಿ-ಚಿಕ್ಕಮಗಳೂರು ಲೋಕಸಭಾ ಚುನಾವಣಾ ಬಿಜೆಪಿ ಅಭ್ಯರ್ಥಿ ಕೋಟ ಶ್ರೀನಿವಾಸ್ ಪೂಜಾರಿಯವರು ಮಾ. 25ರಂದು ಕಾರ್ಕಳ ವಿಧಾನ ಸಭಾ ಕ್ಷೇತ್ರದ ಪ್ರವಾಸ ಕೈಗೊಳ್ಳಲಿದ್ದಾರೆ. ಈ ಹಿನ್ನೆಲೆಯಲ್ಲಿ ಮಾ. 22ರಂದು ಕ್ಷೇತ್ರದ ವಿವಿಧ ಶಕ್ತಿ ಕೇಂದ್ರಗಳಲ್ಲಿ ಪೂರ್ವಭಾವಿ ಸಭೆ ನಡೆಯಿತು.

ಹೆಬ್ರಿ ಶಕ್ತಿ ಕೇಂದ್ರದ ಪೂರ್ವಭಾವಿ ಸಭೆಯಲ್ಲಿ ಚುನಾವಣಾ ಪ್ರಭಾರಿ ಶಾಮಲಾ ಕುಂದರ್, ಕಾರ್ಕಳ ಮಂಡಲ ಅಧ್ಯಕ್ಷ ನವೀನ್ ನಾಯಕ್, ಉಪಾಧ್ಯಕ್ಷೆ ಜ್ಯೋತಿ ಹರೀಶ್ ವರಂಗ, ಪ್ರಧಾನ ಕಾರ್ಯದರ್ಶಿಗಳಾದ ಸುರೇಶ್ ಶೆಟ್ಟಿ, ಸತೀಶ್ ಬೋಳ, ಕಾರ್ಯದರ್ಶಿ ಹರ್ಷವರ್ಧನ್ ನಿಟ್ಟೆ, ಜಿಲ್ಲಾ ಮಹಿಳಾ ಉಪಾಧ್ಯಕ್ಷೆ ಮಾಲಿನಿ ಶೆಟ್ಟಿ, ರಮೇಶ್ ಶಿವಪುರ, ಲಕ್ಷ್ಮೀನಾರಾಯಣ್, ತಾರಾನಾಥ್ ಮತ್ತಿತರರು ಉಪಸ್ಥಿತರಿದ್ದರು. ಜಿಲ್ಲಾ ಬಿಜೆಪಿ ಯುವಮೋರ್ಚಾ ಉಪಾಧ್ಯಕ್ಷ ಸುಹಾಸ್ ಶೆಟ್ಟಿ ಮುಟ್ಲುಪಾಡಿ ಕಾರ್ಯಕ್ರಮ ನಿರ್ವಹಿಸಿದರು.


ಬಜಗೋಳಿ ಶಕ್ತಿ ಕೇಂದ್ರದ ಸಭೆಯಲ್ಲಿ ಚುನಾವಣಾ ಪ್ರಭಾರಿ ಶಾಮಲಾ ಕುಂದರ್, ಕಾರ್ಕಳ ಮಂಡಲ ಅಧ್ಯಕ್ಷ ನವೀನ್ ನಾಯಕ್, ಪ್ರಧಾನ ಕಾರ್ಯದರ್ಶಿ ಸತೀಶ್ ಬೋಳ, ಕಾರ್ಯದರ್ಶಿ ಹರ್ಷವರ್ಧನ್ ನಿಟ್ಟೆ, ಜಿಲ್ಲಾ ಮಹಿಳಾ ಮೋರ್ಚಾದ ಉಪಾಧ್ಯಕ್ಷೆ ಮಾಲಿನಿ ಶೆಟ್ಟಿ ಹಾಗೂ ಬಜಗೋಳಿ ಶಕ್ತಿ ಕೇಂದ್ರದ ಪ್ರಮುಖ ನಾಯಕರು ಮತ್ತು ಕಾರ್ಯಕರ್ತರು ಮತ್ತಿತರರು ಉಪಸ್ಥಿತರಿದ್ದರು.

ಬೈಲೂರು ಶಕ್ತಿ ಕೇಂದ್ರದ ಪೂರ್ವಭಾವಿ ಸಭೆ ಬೈಲೂರು ಮಾರಿಗುಡಿ ಸಭಾಂಗಣದಲ್ಲಿ ನಡೆಯಿತು. ಈ ಸಭೆಯಲ್ಲಿ ಚುನಾವಣಾ ಪ್ರಭಾರಿ ಶಾಮಲಾ ಕುಂದರ್, ಕಾರ್ಕಳ ಮಂಡಲ ಅಧ್ಯಕ್ಷ ನವೀನ್ ನಾಯಕ್, ಪ್ರಧಾನ ಕಾರ್ಯದರ್ಶಿ ಸತೀಶ್ ಬೋಳ, ಕಾರ್ಯದರ್ಶಿ ಹರ್ಷವರ್ಧನ್ ನಿಟ್ಟೆ, ಜಿಲ್ಲಾ ಮಹಿಳಾ ಮೋರ್ಚಾದ ಉಪಾಧ್ಯಕ್ಷೆ ಮಾಲಿನಿ ಶೆಟ್ಟಿ ಹಾಗೂ ಬೈಲೂರು ಶಕ್ತಿ ಕೇಂದ್ರದ ಪ್ರಮುಖ ನಾಯಕರು ಮತ್ತು ಕಾರ್ಯಕರ್ತರು ಉಪಸ್ಥಿತರಿದ್ದರು.































































