ಐದು ತಿಂಗಳು ಕಾದರೂ ಬಾರದ ಬರ ಪರಿಹಾರ

ಕೇಂದ್ರದ ವಿರುದ್ಧ ಸುಪ್ರೀಂಗೆ ಅರ್ಜಿ ಸಲ್ಲಿಸಿದ ರಾಜ್ಯ ಸರಕಾರ

ಬೆಂಗಳೂರು : ಕೇಂದ್ರ ಸರಕಾರ ಬರ ಪರಿಹಾರ ಕೊಡುತ್ತಿಲ್ಲ. ಕೇಂದ್ರ ಮಲತಾಯಿ ಧೋರಣೆ ಮಾಡುತ್ತಿದ್ದು, ಮಧ್ಯಪ್ರವೇಶಿಸಿ ಬರ ಪರಿಹಾರ ಬಿಡುಗಡೆ ಮಾಡಿಸುವಂತೆ ಸುಪ್ರೀಂ ಕೋರ್ಟ್​ಗೆ ರಾಜ್ಯ ಸರಕಾರ ಅರ್ಜಿ ಸಲ್ಲಿಕೆ ಮಾಡಿದೆ. ಇವತ್ತು ಕೊಡ್ತಾರೆ, ನಾಳೆ ಕೊಡ್ತಾರೆ, ಇವತ್ತು ಬರತ್ತೆ, ನಾಳೆ ಬರತ್ತೆ ಅಂತ ಐದು ತಿಂಗಳು ಕಾದಿದ್ದಾಯ್ತು. ನಮಗೆ ಬೇರೆ ದಾರಿ ಇರಲಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.

ಗೃಹ ಕಚೇರಿ ಕೃಷ್ಣದಲ್ಲಿ ಕರೆದಿದ್ದ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಅವರು, ಕೇಂದ್ರದಿಂದ ನಮ್ಮ ಪಾಲಿನ ಪರಿಹಾರ ಬರುತ್ತದೆ ಎಂದು ಕಾದು ಕಾದು ಸಾಕಾಗಿ ಸುಪ್ರೀಂ ಕೋರ್ಟ್ ಮೊರೆ ಹೋದೆವು. ಸಂವಿಧಾನದ ಪರಿಚ್ಛೇದ 32ರ ಅಡಿಯಲ್ಲಿ ನಾವು ನಮ್ಮ ಕಾನೂನುಬದ್ಧ ಹಕ್ಕನ್ನು ಚಲಾಯಿಸಿದ್ದೇವೆ ಎಂದು ವಿವರಿಸಿದರು.

ಬರದ ಸಂದರ್ಭದಲ್ಲಿ, ತುರ್ತು ಸಂದರ್ಭಗಳಲ್ಲಿ ಜನರಿಗೆ ತುರ್ತಾಗಿ ಸ್ಪಂದಿಸಬೇಕು ಎನ್ನುವ ಉದ್ದೇಶದಿಂದಲೇ ವಿಪತ್ತು ನಿರ್ವಹಣಾ ಕಾನೂನು ಮಾಡಲಾಗಿದೆ. ಆದರೆ, ಇದುವರೆಗೂ ಕೇಂದ್ರ ಕಾನೂನು ಬದ್ದವಾಗಿ ನಮಗೆ ಬರಬೇಕಾದ ಹಣದಲ್ಲಿ ಒಂದೇ ಒಂದು ಪೈಸೆಯನ್ನೂ ಕೊಟ್ಟಿಲ್ಲ. ನಾವು ಒಕ್ಕೂಟ ವ್ಯವಸ್ಥೆಯಲ್ಲಿ ಇದ್ದೇವೆ. ರಾಜ್ಯದಲ್ಲಿ 240 ತಾಲೂಕುಗಳಲ್ಲಿ 223 ತಾಲೂಕುಗಳನ್ನು ಬರಗಾಲ ಅಂತ ಘೋಷಿಸಿದ್ದೇವೆ. ನಾಲ್ಕು ಬಾರಿ ಮೌಲ್ಯಮಾಪನ ಮಾಡಿದ್ದೇವೆ. 48 ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ ಕೃಷಿ ಬೆಳೆ ನಷ್ಟ ಆಗಿದೆ. 3 ಬಾರಿ ಸತತವಾಗಿ ಕೇಂದ್ರಕ್ಕೆ ಮನವಿ ಪತ್ರ ಬರೆದೇವು. ಇದುವರೆಗೂ ಕೇಂದ್ರ ಸರ್ಕಾರ ರಾಜ್ಯದ ಪಾಲಿನಲ್ಲಿ ನಯಾ ಪೈಸೆಯನ್ನೂ ಕೊಟ್ಟಿಲ್ಲ ಎಂದರು.













































































error: Content is protected !!
Scroll to Top