ಕೋಟ ಭಾಷಾ ಜ್ಞಾನ ಟೀಕಿಸಿಲ್ಲ : ಜಯಪ್ರಕಾಶ್‌ ಹೆಗ್ಡೆ ಸ್ಪಷ್ಟನೆ

ಉಡುಪಿ: ಬಿಜೆಪಿ ಅಭ್ಯರ್ಥಿ ಕೋಟ ಶ್ರೀನಿವಾಸ ಪೂಜಾರಿ ಅವರ ಭಾಷಾ ಜ್ಞಾನವನ್ನು ನಾನು ಟೀಕಿಸಿಲ್ಲ ಎಂದು ಕಾಂಗ್ರೆಸ್‌ ಅಭ್ಯರ್ಥಿ ಜಯಪ್ರಕಾಶ್‌ ಹೆಗ್ಡೆಯವರು ಸ್ಪಷ್ಟೀಕರಣ ನೀಡಿದ್ದಾರೆ. ಈವರೆಗಿನ ರಾಜಕೀಯ ಜೀವನದಲ್ಲಿ ಯಾರ ಮನಸ್ಸನ್ನೂ ನೋವಿಸುವುದಾಗಲಿ ಅಥವಾ ಕೇವಲವಾಗಿ ಮಾತನಾಡುವುದನ್ನಾಗಲಿ ಮಾಡದೆ ಇರುವ ನಾನು ಭಾಷಾ ಜ್ಞಾನದ ಕುರಿತಂತೆ ಯಾವುದೇ ಟೀಕೆಗಳನ್ನು ಮಾಡಿಲ್ಲ ಎಂದು ಹೇಳಿದ್ದಾರೆ.
ಬ್ರಹ್ಮಾವರದ ಕಾರ್ಯಕ್ರಮವೊಂದರಲ್ಲಿ ಮಾತನಾಡುವ ಸಂದರ್ಭದಲ್ಲಿ ಲೋಕಸಭೆಯಲ್ಲಿ ಭಾಷಾ ಅನುವಾದಕರು ಇರೋದರಿಂದ ಕನ್ನಡದಲ್ಲಿಯೂ ಮಾತನಾಡಬಹುದು. ಆದರೆ ಅಧಿಕಾರಿಗಳು ಇತರರೊಂದಿಗೆ ಕೆಲಸ ಮಾಡುವಾಗ ಇಂಗ್ಲೀಷ್ ಹಾಗೂ ಹಿಂದಿ ಭಾಷೆಗಳ ಜ್ಞಾನ ಬೇಕಾಗುತ್ತದೆ ಎಂದಿದ್ದೆ. ಒಬ್ಬ ಸಂಸದನಾಗಿ ಸೇವೆ ಸಲ್ಲಿಸಿದ ಅನುಭವದ ಆಧಾರದಲ್ಲಿ ಇದನ್ನು ಹೇಳಿದ್ದೇನೆಯೇ ಹೊರತು ಯಾರನ್ನೂ ಉದ್ದೇಶಿಸಿ ಹೇಳಿಲ್ಲ. ನನ್ನ ಮಾತುಗಳನ್ನು ಹೆಕ್ಕಿ, ತಿರುಚಿ ಯಾರದ್ದೋ ಹೆಸರಿಗೆ ಜೋಡಿಸುವ ಕೆಟ್ಟ ಚಾಳಿಯನ್ನು ನಿಲ್ಲಿಸಬೇಕೆಂದು ಮನವಿ ಮಾಡಿದ್ದಾರೆ.

ರಾಜಕೀಯ ಜೀವನದಲ್ಲಿ ನಾನು ಎಲ್ಲಾ ಚುನಾವಣೆಯನ್ನು ಸೈದ್ಧಾಂತಿಕ ನೆಲೆಯಲ್ಲಿಯೇ ಎದುರಿಸಿದ್ದೇನೆ. ಎದುರಾಳಿಗಳನ್ನು ಸೌಜನ್ಯಯುತವಾಗಿ ಹಾಗೂ ಗೌರವದಿಂದ ಕಂಡಿದ್ದೇನೆ. ಅಪಪ್ರಚಾರ ಹಾಗೂ ಸುಳ್ಳು ವದಂತಿಗಳನ್ನು ಮಾಡಿಲ್ಲ ಹಾಗೂ ಅದರಲ್ಲಿ ನನಗೆ ನಂಬಿಕೆಯೂ ಇಲ್ಲ. ಜನಪ್ರತಿಧಿಯಾಗಿ ಸೇವೆ ಸಲ್ಲಿಸಿದ ನನ್ನ ಸೇವೆ ಮತ್ತು ಜನಪ್ರತಿಯೊಬ್ಬರಿಗೆ ಇರುವ ಬದ್ಧತೆಯಡಿಯಲ್ಲಿ ನಾನು ಚುನಾವಣೆಗಳನ್ನು ಎದುರಿಸಿದ್ದೇನೆ ಎಂದು ಅವರು
ತಿಳಿಸಿದ್ದಾರೆ.



















error: Content is protected !!
Scroll to Top